ಚುನಾವಣಾ ನಿಯಮಗಳಿಗೆ ತಿದ್ದುಪಡಿಗಳನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್

Update: 2024-12-24 11:38 GMT

ಜೈರಾಮ್ ರಮೇಶ್, ಸುಪ್ರೀಂ ಕೋರ್ಟ್ | PTI 

ಹೊಸದಿಲ್ಲಿ: ಚುನಾವಣಾ ನಿರ್ವಹಣೆ ನಿಯಮಗಳು,1961ಕ್ಕೆ ಇತ್ತೀಚಿನ ತಿದ್ದುಪಡಿಗಳನ್ನು ಪ್ರಶ್ನಿಸಿ ಕಾಂಗ್ರೆಸ್ ಮಂಗಳವಾರ ಸರ್ವೋಚ್ಚ ನ್ಯಾಯಾಲಯದಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಿದ್ದು,‘ವೇಗವಾಗಿ ನಶಿಸುತ್ತಿರುವ’ ಚುನಾವಣಾ ಪ್ರಕ್ರಿಯೆಯ ಸಮಗ್ರತೆಯನ್ನು ಮರುಸ್ಥಾಪಿಸುವಲ್ಲಿ ಸುಪ್ರೀಂ ಕೋರ್ಟ್ ನೆರವಾಗುತ್ತದೆ ಎಂದು ಭರವಸೆಯನ್ನು ವ್ಯಕ್ತಪಡಿಸಿದೆ

ಸರಕಾರವು ದುರ್ಬಳಕೆಯನ್ನು ತಡೆಯಲು ಸಿಸಿಟಿವಿ ಕ್ಯಾಮೆರಾ ಮತ್ತು ವೆಬ್‌ಕಾಸ್ಟಿಂಗ್ ದೃಶ್ಯಾವಳಿಗಳ ಸಾರ್ವಜನಿಕ ತಪಾಸಣೆ ಹಾಗೂ ಅಭ್ಯರ್ಥಿಗಳಿಂದ ವೀಡಿಯೊ ರೆಕಾರ್ಡಿಂಗ್ ತಡೆಯಲು ಚುನಾವಣಾ ನಿಯಮಗಳಿಗೆ ತಿದ್ದುಪಡಿಗಳನ್ನು ತಂದಿದೆ.     

ಸರ್ವೋಚ್ಚ ನ್ಯಾಯಾಲಯದಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು,ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ನಡೆಸುವ ಹೊಣೆಯನ್ನು ಹೊತ್ತಿರುವ ಸಾಂವಿಧಾನಿಕ ಸಂಸ್ಥೆಯಾಗಿರುವ ಚುನಾವಣಾ ಆಯೋಗವು ಇಂತಹ ಪ್ರಮುಖ ಕಾನೂನನ್ನು ಏಕಪಕ್ಷೀಯವಾಗಿ ಮತ್ತು ಸಾರ್ವಜನಿಕ ಸಮಲೋಚನೆ ನಡೆಸದೆ ಇಂತಹ ಲಜ್ಜೆಗೆಟ್ಟ ರೀತಿಯಲ್ಲಿ ತಿದ್ದುಪಡಿ ಮಾಡಲು ಅನುಮತಿಸಲಾಗುವುದಿಲ್ಲ ಎಂದು ಎಕ್ಸ್ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಚುನಾವಣಾ ಪ್ರಕ್ರಿಯೆಯನ್ನು ಹೆಚ್ಚು ಪಾರದರ್ಶಕ ಮತ್ತು ಉತ್ತರದಾಯಿಯಾಗಿಸುವ ಅಗತ್ಯ ಮಾಹಿತಿಗಳಿಗೆ ಸಾರ್ವಜನಿಕ ಪ್ರವೇಶವನ್ನು ತಿದ್ದುಪಡಿಯು ನಿರ್ಬಂಧಿಸಿದಾಗ ಇದು ವಿಶೇಷವಾಗಿ ಸತ್ಯವಾಗಿದೆ ಎಂದು ರಮೇಶ ಹೇಳಿದ್ದಾರೆ.

ಚುನಾವಣಾ ಆಯೋಗದ ಶಿಫಾರಸುಗಳ ಮೇರೆಗೆ ಕೇಂದ್ರ ಕಾನೂನು ಸಚಿವಾಲಯವು ಶುಕ್ರವಾರ ನಿರ್ದಿಷ್ಟ ದಾಖಲೆಗಳಿಗೆ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲು ಚುನಾವಣೆ ನಿರ್ವಹಣೆ ನಿಯಾಮವಳಿಗಳು,1961ರ ನಿಯಮ 93(2)(ಎ) ಅನ್ನು ತಿದ್ದುಪಡಿಗೊಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News