‘ ಒಂದು ದೇಶ ಒಂದು ಚುನಾವಣೆ’ಗೆ ಕಾಂಗ್ರೆಸ್ ವಿರೋಧ ; ಉನ್ನತಾಧಿಕಾರ ಸಮಿತಿಯ ವಿಸರ್ಜನೆಗೆ ಖರ್ಗೆ ಆಗ್ರಹ

Update: 2024-01-19 16:21 GMT

ಮಲ್ಲಿಕಾರ್ಜುನ ಖರ್ಗೆ | Photo: PTI 

ಹೊಸದಿಲ್ಲಿ : ದೇಶದಲ್ಲಿ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸುವ ಕೇಂದ್ರ ಸರಕಾರದ ಚಿಂತನೆಯನ್ನು ಕಾಂಗ್ರೆಸ್ ಪಕ್ಷವು ಶುಕ್ರವಾರ ಬಲವಾಗಿ ವಿರೋಧಿಸಿದೆ. ಇದು ಒಕ್ಕೂಟ ವ್ಯವಸ್ಥೆಯ ನೀಡುವ ಖಾತರಿಗಳು ಹಾಗೂ ಸಂವಿಧಾನದ ಮೂಲ ಸಂರಚನೆಗೆ ವಿರುದ್ಧವಾದುದಾಗಿದೆ ಎಂದು ಅದು ಹೇಳಿದೆ.

‘ಒಂದು ದೇಶ, ಒಂದು ಚುನಾವಣೆʼ ಎಂಬ ಚಿಂತನೆಯನ್ನು ಕೇಂದ್ರ ಸರಕಾರ ಕೈಬಿಡಬೇಕು ಹಾಗೂ ಈ ನಿಟ್ಟಿನಲ್ಲಿ ರಚನೆಯಾಗಿರುವ ಉನ್ನತಾಧಿಕಾರ ಸಮಿತಿಯನ್ನು ವಿಸರ್ಜಿಸಬೇಕೆಂದು ಕಾಂಗ್ರೆಸ್ ಪಕ್ಷದ ವರಿಷ್ಠ q  ಅವರು, ಆಗ್ರಹಿಸಿದ್ದಾರೆ.

‘ ಒಂದು ದೇಶ ಒಂದು ಚುನಾವಣೆ’ಗಾಗಿನ ಉನ್ನತಾಧಿಕಾರ ಸಮಿತಿಯ ಕಾರ್ಯದರ್ಶಿ ನಿತಿನ್ ಚಂದ್ರ ಅವರಿಗೆ ಬರೆದ ಪತ್ರದಲ್ಲಿ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಸಂವಿಧಾನ ಹಾಗೂ ಸಂಸದೀಯ ಪ್ರಜಾಪ್ರಭುತ್ವವನ್ನು ಬುಡಮೇಲುಗೊಳಿಸುವುದಕ್ಕಾಗಿ ಮಾಜಿ ರಾಷ್ಟ್ರಪತಿಯವರ ಸ್ಥಾನಮಾನವನ್ನು ದುರಪಯೋಗ ಪಡಿಸಿಕೊಳ್ಳುವುದಕ್ಕೆ ಅವಕಾಶ ನೀಡಬಾರದು ಎಂದು ಸಮಿತಿಯ ಅಧ್ಯಕ್ಷರಾದ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಖರ್ಗೆ ಪತ್ರದಲ್ಲಿ ಮನವಿ ಮಾಡಿದ್ದಾರೆ.

‘ಒಂದು ದೇಶ ಒಂದು ಚುನಾವಣೆ’ ಪರಿಕಲ್ಪನೆಯನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಬಲವಾಗಿ ವಿರೋಧಿಸುತ್ತದೆ, ಪ್ರಜಾಪ್ರಭುತ್ವ ಪ್ರವರ್ಧಮಾನಗೊಳ್ಳುವುದನ್ನು ಹಾಗೂ ಅದರ ದೃಢತೆಯನ್ನು ಕಾಪಾಡುವ ಉದ್ದೇಶದಿಂದ ಈ ಇಡೀ ಚಿಂತನೆಯನ್ನು ತೊರೆಯಬೇಕಾಗಿದೆ ಹಾಗೂ ಉನ್ನತಾಧಿಕಾರ ಸಮಿತಿಯನ್ನು ವಿಸರ್ಜಿಸಬೇಕಾಗಿದೆ’’ ಎಂದು ಖರ್ಗೆ ಅವರು ನಿತಿನ್ಚಂದ್ರ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

‘ ‘ ಒಂದು ದೇಶ, ಒಂದು ಚುನಾವಣೆಯನ್ನು ನಡೆಸುವ ಉದ್ದೇಶದಿಂದ ಕೇಂದ್ರ ಸರಕಾರವು ರಚಿಸಿದ ಉನ್ನತಾಧಿಕಾರ ಸಮಿತಿಯ ಕಾರ್ಯದರ್ಶಿ ಸತೀಶ್ಚಂದ್ರ ಅವರು ವಿವಿಧ ರಾಜಕೀಯ ಪಕ್ಷಗಳಿಗೆ ಆಕ್ಟೋಬರ್ 18ರಂದು ಸಲಹೆ, ಸೂಚನೆಗಳನ್ನು ಆಹ್ವಾನಿಸಿದ್ದರು. ಇದಕ್ಕೆ ಉತ್ತರವಾಗಿ ಖರ್ಗೆ ಈ ಪತ್ರವನ್ನು ಬರೆದಿದ್ದಾರೆ.

‘ ಜನತೆಯ ಗಮನವನ್ನು ಬೇರೆಡೆಗೆ ಸೆಳೆಯುವ ಉದ್ದೇಶದಿಂದ ಏಕಕಾಲಕ್ಕೆ ಚುನಾವಣೆಗಳನ್ನು ನಡೆಸುವಂತಹ ಅಪ್ರಜಾಸತ್ತಾತ್ಮಕ ಚಿಂತನೆಗಳ ಬಗ್ಗೆ ಮಾತನಾಡುವುದನ್ನು ಬಿಟ್ಟು ಕೇಂದ್ರ ಸರಕಾರ, ಸಂಸತ್ ಹಾಗೂ ಭಾರತೀಯ ಚುನಾವಣಾ ಆಯೋಗವು ಜನಾದೇಶವು ಗೌರವಿಸಲ್ಪಡುವುದನ್ನು ಖಾತರಿಪಡಿಸಿಕೊಳ್ಳಬೇಕಾಗಿದೆ ’’ ಎಂದು ಖರ್ಗೆ ಪತ್ರದಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News