ಒಂದು ಕ್ಷೇತ್ರ ಹೊರತುಪಡಿಸಿ, 88 ಅಭ್ಯರ್ಥಿಗಳ ಎರಡನೇ ಪಟ್ಟಿ ಪ್ರಕಟಿಸಿದ ಕಾಂಗ್ರೆಸ್

Update: 2023-10-20 16:35 GMT

 ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ಅವರೊಂದಿಗೆ ಪಕ್ಷದ ನಾಯಕ ದಿಗ್ವಿಜಯ ಸಿಂಗ್  Photo: PTI

ಹೊಸದಿಲ್ಲಿ: ಕಾಂಗ್ರೆಸ್ 230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗಾಗಿ 88 ಅಭ್ಯರ್ಥಿಗಳ ತನ್ನ ಎರಡನೇ ಪಟ್ಟಿಯನ್ನು ಗುರುವಾರ ರಾತ್ರಿ ಪ್ರಕಟಿಸಿದೆ. ಇದರೊಂದಿಗೆ ನ.17ರಂದು ನಡೆಯಲಿರುವ ಚುನಾವಣೆಗಾಗಿ ಪಕ್ಷವು ಒಂದನ್ನು ಹೊರತುಪಡಿಸಿ ಎಲ್ಲ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.

ಬೇತುಲ್ ಜಿಲ್ಲೆಯ ಅಮ್ಲಾ ವಿಧಾನಸಭಾ ಕ್ಷೇತ್ರದಲ್ಲಿ ತನ್ನ ಅಭ್ಯರ್ಥಿಯನ್ನು ಕಾಂಗ್ರೆಸ್ ಇನ್ನೂ ನಿರ್ಧರಿಸಿಲ್ಲ. ಜಿಲ್ಲಾಧಿಕಾರಿ ನಿಶಾ ಬಾಂಗ್ರೆ ಅವರು ಈ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಕೋರಿದ್ದಾರೆ. ಆದರೆ ಅವರು ಹುದ್ದೆಗೆ ಸಲ್ಲಿಸಿರುವ ರಾಜೀನಾಮೆಯನ್ನು ಆಡಳಿತಾರೂಢ ಬಿಜೆಪಿ ಸರಕಾರವು ಇನ್ನೂ ಒಪ್ಪಿಕೊಂಡಿಲ್ಲ ಮತ್ತು ವಿಷಯವು ಪ್ರಸ್ತುತ ನ್ಯಾಯಾಲಯದಲ್ಲಿ ಬಾಕಿಯಿದೆ ಎಂದು ಪಕ್ಷದ ಮೂಲಗಳು ತಿಳಿಸಿದವು.

ಈ ಹಿಂದೆ ಕಾಂಗ್ರೆಸ್ 144 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿತ್ತು, ಆದರೆ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸುವಾಗ ಮೂವರು ಅಭ್ಯರ್ಥಿಗಳನ್ನು ಬದಲಿಸಿದೆ. ಹೀಗಾಗಿ ಮೊದಲ ಪಟ್ಟಿಯಲ್ಲಿನ ಅಭ್ಯರ್ಥಿಗಳ ಸಂಖ್ಯೆ ಈಗ 141ಕ್ಕೆ ಸೀಮಿತವಾಗಿದೆ ಎಂದು ಪಕ್ಷದ ನಾಯಕರೋರ್ವರು ತಿಳಿಸಿದರು.

ಮಾಜಿ ಸಚಿವ ಚೌಧರಿ ರಾಕೇಶ ಸಿಂಗ್ ಚತುರ್ವೇದಿ (ಭಿಂದ್),ಸುಭಾಷ ಸೋಜತಿಯಾ (ಗರೋತ್) ಮತ್ತು ರಾಜಕುಮಾರ ಪಟೇಲ್ (ಭೋಜಪುರ) ಎರಡನೇ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಪ್ರಮುಖ ನಾಯಕರಲ್ಲಿ ಸೇರಿದ್ದಾರೆ.

ಮತದಾನವು ನ.17ರಂದು ನಡೆಯಲಿದ್ದು, ಡಿ.3ರಂದು ಮತಗಳ ಎಣಿಕೆ ನಡೆಯಲಿದೆ.

Tags:    

Writer - ವಾರ್ತಾಭಾರತಿ

contributor

Editor - Althaf

contributor

Byline - ವಾರ್ತಾಭಾರತಿ

contributor

Similar News