ಛತ್ತೀಸ್‌ಗಢ, ಮ.ಪ್ರ, ತೆಲಂಗಾಣ ವಿಧಾನಸಭಾ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

Update: 2023-10-15 08:05 GMT

ಹೊಸದಿಲ್ಲಿ: ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ತೆಲಂಗಾಣ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ರವಿವಾರ ಪ್ರಕಟಿಸಿದೆ.

ಕಾಂಗ್ರೆಸ್ ಮಧ್ಯಪ್ರದೇಶ ಚುನಾವಣೆಗೆ 144 ಪಕ್ಷದ ಅಭ್ಯರ್ಥಿಗಳನ್ನು ಘೋಷಿಸಿದ್ದರೆ, ಛತ್ತೀಸ್‌ಗಢ ಚುನಾವಣೆಗೆ 30 ಅಭ್ಯರ್ಥಿಗಳನ್ನು ಮತ್ತು ಮುಂದಿನ ತಿಂಗಳು ನಡೆಯಲಿರುವ ತೆಲಂಗಾಣ ವಿಧಾನಸಭಾ ಚುನಾವಣೆಗೆ 55 ಅಭ್ಯರ್ಥಿಗಳನ್ನು ಘೋಷಿಸಿದೆ.

ಮಧ್ಯಪ್ರದೇಶದಲ್ಲಿ, ಚಿಂದ್ವಾರ ವಿಧಾನಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಮತ್ತು ಪಿಸಿಸಿ ಮುಖ್ಯಸ್ಥ ಕಮಲ್ ನಾಥ್ ಅವರನ್ನು ಕಾಂಗ್ರೆಸ್‌ ಕಣಕ್ಕಿಳಿಸಿದೆ. ಕಮಲ್ ನಾಥ್ ಸರ್ಕಾರದಲ್ಲಿ ಸಚಿವರಾಗಿದ್ದ, ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಪುತ್ರ ಜೈವರ್ಧನ್ ಸಿಂಗ್ ರಘೀಗತ್ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.

ಛತ್ತೀಸ್‌ಗಢದಲ್ಲಿ, ಪಕ್ಷವು ತನ್ನ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರನ್ನು ಅವರ ಪಟಾನ್ ವಿಧಾನಸಭಾ ಕ್ಷೇತ್ರದಿಂದ ಮತ್ತು ಉಪ ಮುಖ್ಯಮಂತ್ರಿ ಟಿ ಎಸ್ ಸಿಂಗ್ ದೇವ್ ಅವರನ್ನು ಅಂಬಿಕಾಪುರ ವಿಧಾನಸಭಾ ಕ್ಷೇತ್ರದಿಂದ ಪಕ್ಷವು ಕಣಕ್ಕಿಳಿಸಿದೆ.

ತೆಲಂಗಾಣದಲ್ಲಿ, ಪಕ್ಷವು ಪ್ರದೇಶ ಕಾಂಗ್ರೆಸ್ ಮುಖ್ಯಸ್ಥೆ ಅನುಮಲಾ ರೇವಂತ್ ರೆಡ್ಡಿ ಅವರನ್ನು ಕೊಡಂಗಲ್ ವಿಧಾನಸಭಾ ಕ್ಷೇತ್ರದಿಂದ ಮತ್ತು ಸಿಎಲ್‌ಪಿ ನಾಯಕ ಭಟ್ಟಿ ವಿಕ್ರಮಾರ್ಕ ಮಲ್ಲು ಅವರನ್ನು ಮಧಿರಾ-ಎಸ್‌ಸಿ ಕ್ಷೇತ್ರದಿಂದ ಕಣಕ್ಕಿಳಿಸಿದೆ.

ಛತ್ತೀಸ್‌ಗಢ ವಿಧಾನಸಭಾ ಚುನಾವಣೆ ನವೆಂಬರ್ 7 ಮತ್ತು 17 ರಂದು ಎರಡು ಹಂತಗಳಲ್ಲಿ ನಡೆದರೆ, ಮಧ್ಯಪ್ರದೇಶ ಚುನಾವಣೆ ನವೆಂಬರ್ 17 ರಂದು ನಡೆಯಲಿದೆ. ತೆಲಂಗಾಣ ವಿಧಾನಸಭಾ ಚುನಾವಣೆ ನವೆಂಬರ್ 30 ರಂದು ನಡೆಯಲಿದೆ. ಡಿಸೆಂಬರ್ 3 ರಂದು ಫಲಿತಾಂಶ ಪ್ರಕಟವಾಗಲಿದೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News