ಹೊಸ ಸಂಸತ್ ಕಟ್ಟಡದ ವಾಸ್ತುಶೈಲಿ ಪ್ರಜಾಪ್ರಭುತ್ವದ ಆಶಯಗಳನ್ನು ಕೊಂದಿದೆ ಎಂದ ಕಾಂಗ್ರೆಸ್!

ಹೊಸ ಸಂಸತ್ ಭವನದ ವಾಸ್ತುಶೈಲಿ ಪ್ರಜಾಪ್ರಭುತ್ವ ಮತ್ತು ಅದರ ಆಶಯಗಳನ್ನು ಕೊಂದಿದೆ ಎಂದು ಆರೋಪಿಸಿ ಕಾಂಗ್ರೆಸ್ ಶನಿವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದೆ. ಇದು 140 ಕೋಟಿ ಭಾರತೀಯರ ಆಕಾಂಕ್ಷೆಗಳಿಗೆ ಮಾಡಿದ ಅವಮಾನ ಎಂದು ಬಿಜೆಪಿ ಪ್ರತ್ಯಾರೋಪ ಮಾಡಿದೆ

Update: 2023-09-23 11:49 GMT

PHOTO:ANI

ಹೊಸದಿಲ್ಲಿ: ಹೊಸ ಸಂಸತ್ ಭವನದ ವಾಸ್ತುಶೈಲಿ ಪ್ರಜಾಪ್ರಭುತ್ವ ಮತ್ತು ಅದರ ಆಶಯಗಳನ್ನು ಕೊಂದಿದೆ ಎಂದು ಆರೋಪಿಸಿ ಕಾಂಗ್ರೆಸ್ ಶನಿವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದೆ. ಇದು 140 ಕೋಟಿ ಭಾರತೀಯರ ಆಕಾಂಕ್ಷೆಗಳಿಗೆ ಮಾಡಿದ ಅವಮಾನ ಎಂದು ಬಿಜೆಪಿ ಪ್ರತ್ಯಾರೋಪ ಮಾಡಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಹೊಸ ಸಂಸತ್ ಕಟ್ಟಡವನ್ನು ಮೋದಿ ಮಲ್ಟಿಪ್ಲೆಕ್ಸ್ ಅಥವಾ ಮೋದಿ ಮ್ಯಾರಿಯೆಟ್ ಎಂದು ಕರೆಯಬೇಕು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ವ್ಯಂಗ್ಯವಾಡಿದ್ದಾರೆ.

"2024 ರಲ್ಲಿ ಆಡಳಿತ ಬದಲಾವಣೆಯ ನಂತರ ಬಹುಶಃ ಹೊಸ ಸಂಸತ್ತಿನ ಕಟ್ಟಡದ ಉತ್ತಮ ಬಳಕೆಯನ್ನು ಕಾಣಬಹುದು" ಎಂದು ರಮೇಶ್ x ನ ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದಾರೆ.

"ಅದ್ದೂರಿ ಪ್ರಚಾರದೊಂದಿಗೆ ಪ್ರಾರಂಭಿಸಲಾದ ಹೊಸ ಸಂಸತ್ತಿನ ಕಟ್ಟಡವು ನಿಜವಾಗಿಯೂ ಪ್ರಧಾನಿಯವರ ಉದ್ದೇಶಗಳನ್ನು ಚೆನ್ನಾಗಿ ಅರಿತುಕೊಂಡಿದೆ. ಇದನ್ನು ಮೋದಿ ಮಲ್ಟಿಪ್ಲೆಕ್ಸ್ ಅಥವಾ ಮೋದಿ ಮ್ಯಾರಿಯೆಟ್ ಎಂದು ಕರೆಯಬೇಕು. ನಾಲ್ಕು ದಿನಗಳ ನಂತರ, ನಾನು ನೋಡಿದ್ದು ಉಭಯ ಸದನಗಳ ಒಳಗೆ ಮತ್ತು ಹೊರಗೆ ಗೊಂದಲಗಳು ಮತ್ತು ಆರೋಪ ಪ್ಯತ್ಯಾರೋಪಗಳೇ ಮೇಳೈಸಿದವು. ಕೇವಲ ಒಂದು ಕಟ್ಟಡದ ವಾಸ್ತುಶೈಲಿಯು ಪ್ರಜಾಪ್ರಭುತ್ವವನ್ನು ಕೊಲ್ಲಬಹುದಾದರೆ, ಸಂವಿಧಾನವನ್ನು ಮತ್ತೆ ಬದಲಾಯಿಸದೇ ಪ್ರಧಾನಿ ಈಗಾಗಲೇ ಆ ಕೆಲಸ ಮಾಡಿ ಯಶಸ್ವಿಯಾಗಿದ್ದಾರೆ”, ಎಂದು ಜೈರಾಮ್ ರಮೇಶ್ ಹೇಳಿದರು.

ಇದಕ್ಕೆ ತಿರುಗೇಟು ನೀಡಿರುವ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, "ಕಾಂಗ್ರೆಸ್ ಪಕ್ಷದ ಮನಸ್ಥಿತಿ ಅತ್ಯಂತ ಕೆಳಮಟ್ಟದಲ್ಲಿದೆ. ಇದು 140 ಕೋಟಿ ಭಾರತೀಯರ ಆಕಾಂಕ್ಷೆಗಳಿಗೆ ಮಾಡಿದ ಅವಮಾನ" ಎಂದು ಹೇಳಿದ್ದಾರೆ

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News