ಜಾರ್ಖಂಡ್ ಚುನಾವಣೆಯಲ್ಲಿ 16 ಸ್ಥಾನಗಳಲ್ಲಿ ಗೆಲುವು | 4 ಸಚಿವ ಸ್ಥಾನಗಳಿಗೆ ಕಾಂಗ್ರೆಸ್ ನಿಂದ ಬೇಡಿಕೆ : ವರದಿ

Update: 2024-11-24 14:55 IST
ಜಾರ್ಖಂಡ್ ಚುನಾವಣೆಯಲ್ಲಿ 16 ಸ್ಥಾನಗಳಲ್ಲಿ ಗೆಲುವು | 4 ಸಚಿವ ಸ್ಥಾನಗಳಿಗೆ ಕಾಂಗ್ರೆಸ್ ನಿಂದ ಬೇಡಿಕೆ : ವರದಿ
Photo : File photo (indiatoday)
  • whatsapp icon

ರಾಂಚಿ : ನೂತನ ಜಾರ್ಖಂಡ್ ಸರಕಾರದಲ್ಲಿ ನಾಲ್ಕು ಸಚಿವ ಸ್ಥಾನಕ್ಕೆ ಕಾಂಗ್ರೆಸ್ ಬೇಡಿಕೆ ಇಟ್ಟಿದೆ. ಈ ಬೇಡಿಕೆಯು 4:1 ಸೂತ್ರದ ಅನುಪಾತ ಹೊಂದಿದ್ದು, ತಮ್ಮ ಪಕ್ಷದ 16 ಶಾಸಕರು ಚುನಾಯಿತರಾಗಿರುವುದು ಇದಕ್ಕೆ ಕಾರಣ ಎಂದು ಕಾಂಗ್ರೆಸ್ ಉಲ್ಲೇಖಿಸಿದೆ. ಅಧಿಕಾರ ಹಂಚಿಕೆ ಕುರಿತು ಚರ್ಚೆಗಳು ಪ್ರಗತಿಯಲ್ಲಿವೆ ಎಂದು ಮೂಲಗಳು ತಿಳಿಸಿವೆ ಎಂದು India Today ಸುದ್ದಿ ಸಂಸ್ಥೆ ವರದಿ ಮಾಡಿದೆ.

ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಜಾರ್ಖಂಡ್ ಮುಕ್ತಿ ಮೋರ್ಚಾ 34 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಕಾಂಗ್ರೆಸ್ 16 ಹಾಗೂ ಆರ್ಜೆಡಿ 4 ಸ್ಥಾನಗಳಲ್ಲಿ ಜಯಭೇರಿ ಬಾರಿಸಿವೆ. ಇದರೊಂದಿಗೆ ಸಿಪಿ(ಐ)ಎಂ ಎರಡು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಇದರಿಂದಾಗಿ ಸತತ ಎರಡನೆ ಬಾರಿ ಇಂಡಿಯಾ ಮೈತ್ರಿಕೂಟದ ಸರಕಾರವು ಜಾರ್ಖಂಡ್ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವಂತಾಗಿದೆ.

ಈ ನಡುವೆ, ನವೆಂಬರ್ 26ರಂದು ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೇನ್ ಸತತ ನಾಲ್ಕನೆ ಬಾರಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತಿತರರು ಪಾಲ್ಗೊಳ್ಳುವ ನಿರೀಕ್ಷೆ ಇದೆ.

Tags:    

Writer - ವಾರ್ತಾಭಾರತಿ

contributor

Editor - Musaveer

contributor

Byline - ವಾರ್ತಾಭಾರತಿ

contributor

Similar News