ʼಅಂಬೇಡ್ಕರ್ʼ ಹೇಳಿಕೆ ವಿವಾದ | ಸಂಸತ್ತಿನಲ್ಲಿ ಬಿಜೆಪಿ, ಇಂಡಿಯಾ ಒಕ್ಕೂಟದಿಂದ ಪ್ರತಿಭಟನೆ
ಹೊಸದಿಲ್ಲಿ : ಸಂಸತ್ತಿನಲ್ಲಿ ಬಿಆರ್ ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟದ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದರೆ, ಮತ್ತೊಂದು ಕಡೆ ಬಿಜೆಪಿ ಸಂಸದರು ಕಾಂಗ್ರೆಸ್ ವಿರುದ್ಧ ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ
ಸಂಸತ್ತಿನ ಆವರಣವು ಗುರುವಾರ ರಾಜಕೀಯ ಪ್ರತಿಭಟನೆಗೆ ಸಾಕ್ಷಿಯಾಗಿದೆ.
ಕಾಂಗ್ರೆಸ್ ಸಾರ್ವಜನಿಕರನ್ನು ದಾರಿ ತಪ್ಪಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಸಂಸದರು ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಆದರೆ ಕಾಂಗ್ರೆಸ್ ಪಕ್ಷವು ಗೃಹ ಸಚಿವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿತು.
ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಮಾಡಿದ ಅವಮಾನವನ್ನು ಸಹಿಸುವುದಿಲ್ಲ ಎಂದು ಬಿಜೆಪಿ ಸಂಸದರು ಆವರಣದಲ್ಲಿ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆ ವೇಳೆ "ಅಂಬೇಡ್ಕರ್ ನಮಗೆ ದಾರಿ ತೋರಿಸಿದರು, ಕಾಂಗ್ರೆಸ್ ದಾರಿ ತಪ್ಪಿಸಿತು" ಎಂಬ ಬ್ಯಾನರ್‌ಗಳನ್ನು ಬಿಜೆಪಿ ಪ್ರದರ್ಶಿಸಿತು.
ಇಂಡಿಯಾ ಒಕ್ಕೂಟದ ಸಂಸದರು ಸಂಸತ್ತಿನ ಮುಖ್ಯ ದ್ವಾರವಾದ ಮಕರ ದ್ವಾರದ ಗೋಡೆಗಳನ್ನು ಏರಿ ಕ್ಷಮೆಯಾಚಿಸುವಂತೆ ಮತ್ತು ಅಮಿತ್ ಶಾ ಅವರ ರಾಜೀನಾಮೆಗೆ ಒತ್ತಾಯಿಸುವ ಫಲಕಗಳನ್ನು ಪ್ರದರ್ಶಿಸಿದರು.