"ಮೋದಿ ಸರ್ಕಾರದ ಭ್ರಷ್ಟಾಚಾರ ಬಯಲುಗೊಳಿಸುವತ್ತ ಮೊದಲ ಹೆಜ್ಜೆ": ಚುನಾವಣಾ ಬಾಂಡ್‌ ಕುರಿತ ಸುಪ್ರೀಂ ತೀರ್ಪು ಸ್ವಾಗತಿಸಿದ ಕಾಂಗ್ರೆಸ್‌

Update: 2024-03-11 12:09 GMT

ಮಲ್ಲಿಕಾರ್ಜುನ ಖರ್ಗೆ (Photo: PTI)

ಹೊಸದಿಲ್ಲಿ: ಚುನಾವಣಾ ಬಾಂಡ್‌ ಮಾಹಿತಿ ನೀಡಲು ಜೂನ್‌ 30ರವರೆಗೆ ಕಾಲಾವಕಾಶ ಕೋರಿ ಸುಪ್ರೀಂ ಕೋರ್ಟ್‌ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿ ನಾಳೆ ಸಂಜೆಯೊಳಗೆ ಮಾಹಿತಿ ನೀಡುವಂತೆ ಸೂಚಿಸಿದ ಉನ್ನತ ನ್ಯಾಯಾಲಯದ ಆದೇಶವನ್ನು ಕಾಂಗ್ರೆಸ್‌ ಪಕ್ಷ ಸ್ವಾಗತಿಸಿದೆ.

ಸುಪ್ರೀಂ ಕೋರ್ಟಿನ ತೀರ್ಪು ಪಾರದರ್ಶಕತೆ ಮತ್ತು ಉತ್ತರದಾಯಿತ್ವಕ್ಕೆ ದೊರೆತ ಜಯವಾಗಿದೆ ಎಂದು ಕಾಂಗ್ರೆಸ್‌ ಹೇಳಿದೆ.

ಚುನಾವಣಾ ಬಾಂಡ್‌ಗಳ ವಿವರ ನೀಡಲು ನಾಲ್ಕೂವರೆ ತಿಂಗಳು ಸಮಯಾವಕಾಶವನ್ನು ಎಸ್‌ಬಿಐ ಕೇಳಿದಾಗಲೇ, ತನ್ನ ಕರಾಳ ಕೃತ್ಯಗಳನ್ನು ಮುಚ್ಚಿಹಾಕಲು ಮೋದಿ ಸರ್ಕಾರ ಯತ್ನಿಸುತ್ತಿದೆ ಎಂಬುದು ಸ್ಪಷ್ಟವಾಗಿತ್ತು ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಚುನಾವಣಾ ಬಾಂಡ್‌ಗಳ ಮೂಲಕ ಬಿಜೆಪಿಗೆ ಯಾರು ದೇಣಿಗೆ ನೀಡಿದ್ದರೆಂದು ಇಂದಿನ ಸುಪ್ರೀಂ ಕೋರ್ಟ್‌ ತೀರ್ಪಿನ ಕಾರಣ ಜನರಿಗೆ ತಿಳಿಯಲಿದೆ. ಮೋದಿ ಸರ್ಕಾರದ ಭ್ರಷ್ಟಾಚಾರ, ಹಗರಣಗಳನ್ನು ಬಯಲುಗೊಳಿಸುವತ್ತ ಇದು ಮೊದಲ ಹೆಜ್ಜೆಯಾಗಲಿದೆ,” ಎಂದು ಖರ್ಗೆ ತಮ್ಮ ಎಕ್ಸ್‌ ಪೋಸ್ಟ್‌ನಲ್ಲಿ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News