ಪೋಷಕರ ಇಚ್ಛೆಗೆ ವಿರುದ್ಧವಾಗಿ ವಿವಾಹವಾಗುವ ಜೋಡಿಗಳಿಗೆ ಪೊಲೀಸ್ ರಕ್ಷಣೆಯನ್ನು ʼಹಕ್ಕುʼ ಎಂದು ಪರಿಗಣಿಸಲು ಸಾಧ್ಯವಿಲ್ಲ: ಅಲಹಾಬಾದ್ ಹೈಕೋರ್ಟ್
Update: 2025-04-17 11:54 IST

ಸಾಂದರ್ಭಿಕ ಚಿತ್ರ (PTI)
ಹೊಸದಿಲ್ಲಿ : ಪೋಷಕರ ಇಚ್ಛೆಗೆ ವಿರುದ್ಧವಾಗಿ ತಮ್ಮ ಸ್ವಂತ ಇಚ್ಛೆಯಂತೆ ವಿವಾಹವಾಗುವ ಜೋಡಿಗಳು ಅವರ ಜೀವ ಮತ್ತು ಸ್ವಾತಂತ್ರ್ಯಕ್ಕೆ ನಿಜವಾದ ಬೆದರಿಕೆ ಇಲ್ಲದಿದ್ದರೆ ಪೊಲೀಸ್ ರಕ್ಷಣೆಯನ್ನು ʼಹಕ್ಕುʼ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.
ಶ್ರೇಯಾ ಕೇಸರವಾಣಿ ಮತ್ತು ಪತಿ ವಿವಾಹಕ್ಕೆ ಪೊಲೀಸ್ ರಕ್ಷಣೆ ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀವಾಸ್ತವ ಅವರ ನೇತೃತ್ವದ ಅಲಹಾಬಾದ್ ಹೈಕೋರ್ಟ್ ಪೀಠವು, ಈ ಮಹತ್ವದ ಆದೇಶವನ್ನು ನೀಡಿದೆ.
ಅರ್ಹ ಸಂದರ್ಭಗಳಲ್ಲಿ ಭದ್ರತೆಯನ್ನು ನೀಡಬಹುದು ಆದರೆ, ದಂಪತಿಗಳಿಗೆ ಯಾವುದೇ ಬೆದರಿಕೆಗಳಿಲ್ಲದಿದ್ದರೆ ಸಮಾಜವನ್ನು ಒಟ್ಟಿಗೆ ಎದುರಿಸಬೇಕಾಗುತ್ತದೆ ಎಂದು ಅಲಹಾಬಾದ್ ಹೈಕೋರ್ಟ್ ಪೀಠವು ಹೇಳಿದೆ.