'ಎಮರ್ಜೆನ್ಸಿ' ಚಿತ್ರ ವಿವಾದ: ಪ್ರಮಾಣಪತ್ರ ನೀಡುವಂತೆ ಸಿಬಿಎಫ್‌ಸಿಗೆ ನಿರ್ದೇಶನಕ್ಕೆ ನಿರಾಕರಿಸಿದ ಕೋರ್ಟ್

Update: 2024-09-04 09:51 GMT

ಮುಂಬೈ: ಕಂಗನಾ ರಣಾವತ್ ನಿರ್ದೇಶನದ 'ಎಮರ್ಜೆನ್ಸಿ' ಚಿತ್ರಕ್ಕೆ ತಕ್ಷಣವೇ ಪ್ರಮಾಣಪತ್ರ ನೀಡುವಂತೆ ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (ಸಿಬಿಎಫ್‌ಸಿ) ಗೆ ನಿರ್ದೇಶನ ನೀಡಲು ಬಾಂಬೆ ಹೈಕೋರ್ಟ್ ಬುಧವಾರ ನಿರಾಕರಿಸಿದೆ.

ಎಮರ್ಜೆನ್ಸಿ ಚಿತ್ರದ ಸಹ-ನಿರ್ಮಾಪಕ ಝೀ ಸ್ಟುಡಿಯೋಸ್ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ನ ದ್ವಿಸದಸ್ಯ ಪೀಠ ವಿಚಾರಣೆ ನಡೆಸುತ್ತಿದೆ.

ಸಿಖ್ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ ನಂತರ ಚರ್ಚೆಯ ಕೇಂದ್ರ ಬಿಂದುವಾಗಿದ್ದ ಕಂಗನಾ ರಣಾವತ್ ಅಭಿನಯದ 'ಎಮರ್ಜೆನ್ಸಿ' ಚಿತ್ರ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿ ಬಾಂಬೆ ಹೈಕೋರ್ಟ್‌ನಿಂದ ಇಂದು ಯಾವುದೇ ಪರಿಹಾರ ಸಿಕ್ಕಿಲ್ಲ. ಮಧ್ಯಪ್ರದೇಶ ಹೈಕೋರ್ಟಿನ ಆದೇಶಕ್ಕೆ ವ್ಯತಿರಿಕ್ತವಾಗಿರುವುದರಿಂದ ಚಿತ್ರದ ನಿರ್ಮಾಪಕರಿಗೆ ಪ್ರಮಾಣಪತ್ರ ನೀಡುವಂತೆ ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (ಸಿಬಿಎಫ್‌ಸಿ)ಯನ್ನು ಕೇಳಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಈ ಚಲನಚಿತ್ರವನ್ನು ಎಂಎಸ್ ರನೌತ್ ಅವರ ಮಣಿಕರ್ಣಿಕಾ ಫಿಲ್ಮ್ಸ್ ಮತ್ತು ಝೀ ಸ್ಟುಡಿಯೋಸ್ ನಿರ್ಮಾಣ ಮಾಡಿದೆ. ಸೆ. 6ರಂದು ಚಲನಚಿತ್ರವನ್ನು ಬಿಡುಗಡೆ ಮಾಡಲು ಮೊದಲೇ ನಿಗದಿಪಡಿಸಲಾಗಿತ್ತು. ಝೀ ಎಂಟರ್‌ಟೈನ್‌ಮೆಂಟ್ ಎಂಟರ್‌ಪ್ರೈಸಸ್ ಬಾಂಬೆ ಹೈಕೋರ್ಟ್‌ಗೆ ಮೊರೆ ಹೋಗಿದ್ದು, ಚಿತ್ರದ ಬಿಡುಗಡೆಗೆ ನೀಡಿದ್ದ ತಡೆ ತೆರವುಗೊಳಿಸುವ ಪ್ರಮಾಣಪತ್ರವನ್ನು ನೀಡಲು ಸೆನ್ಸಾರ್ ಮಂಡಳಿಗೆ ನಿರ್ದೇಶನವನ್ನು ಕೋರಿದೆ. ಬಾಂಬೆ ಹೈಕೋರ್ಟಿನಲ್ಲಿ ಹಿನ್ನಡೆಯಾಗಿದೆ ಎಂದರೆ ಚಿತ್ರವು ಶೀಘ್ರದಲ್ಲೇ ಬಿಡುಗಡೆಯಾಗುವ ಸಾಧ್ಯತೆಯಿಲ್ಲ.

'ಎಮರ್ಜೆನ್ಸಿ' 1975ರಲ್ಲಿ ಇಂದಿರಾಗಾಂಧಿ ಸರ್ಕಾರವು ಹೇರಿದ ತುರ್ತು ಪರಿಸ್ಥಿತಿಯನ್ನು ಆಧರಿಸಿದ ಚಲನಚಿತ್ರವಾಗಿದ್ದು, ಚಿತ್ರದಲ್ಲಿ ಸಿಖ್ಖರನ್ನು ತಪ್ಪಾಗಿ ಪ್ರತಿನಿಧಿಸಲಾಗಿದೆ ಎಂದು ನಿಷೇಧವನ್ನು ಕೋರಿದ್ದಾರೆ. ಸೆನ್ಸಾರ್ ಮಂಡಳಿಯು ನಂತರ ಚಿತ್ರಕ್ಕೆ ತಡೆಹಿಡಿದಿದೆ ಎಂದು ರಣಾವತ್ ಹೇಳಿದ್ದರು. ಕೆಲವು ಧಾರ್ಮಿಕ ಸಂಘಟನೆಗಳು ʼಎಮರ್ಜೆನ್ಸಿ' ಚಿತ್ರದ ಬಗ್ಗೆ ಕಳವಳ ವ್ಯಕ್ತಪಡಿಸಿವೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಎರಡು ಸಿಖ್ ಸಂಘಟನೆಗಳು ಮಧ್ಯಪ್ರದೇಶ ಹೈಕೋರ್ಟ್‌ನಲ್ಲಿ ಚಿತ್ರದ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಹೂಡಿದ್ದವು. ಇದಕ್ಕೆ ಪ್ರತಿಕ್ರಿಯಿಸಿದ ಸೆನ್ಸಾರ್ ಮಂಡಳಿ, ಚಿತ್ರಕ್ಕೆ ಪ್ರಮಾಣಪತ್ರ ನೀಡಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News