ಅಕ್ರಮ ಹಣ ವರ್ಗಾವಣೆ ಪ್ರಕರಣ:‌ ಆಪ್ ಶಾಸಕ ಅಮಾನತುಲ್ಲಾ ಖಾನ್ ಗೆ 4 ದಿನಗಳ ಈಡಿ ಕಸ್ಟಡಿ

Update: 2024-09-03 06:39 GMT

ಅಮಾನತುಲ್ಲಾ ಖಾನ್ (PTI)

ಹೊಸದಿಲ್ಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಈಡಿ ಅಧಿಕಾರಿಗಳಿಂದ ಬಂಧಿತ ಆಪ್ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ನಾಲ್ಕು ದಿನಗಳ ಕಾಲ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ಒಪ್ಪಿಸಿ ದಿಲ್ಲಿ ನ್ಯಾಯಾಲಯ ಆದೇಶವನ್ನು ನೀಡಿದೆ.

ಬಂಧನದ ಕೆಲವೇ ಗಂಟೆಗಳಲ್ಲಿ ಜಾರಿ ನಿರ್ದೇಶನಾಲಯವು ಖಾನ್ ಅವರನ್ನು ವಿಶೇಷ ನ್ಯಾಯಾಧೀಶ ರಾಕೇಶ್ ಸೈಲ್ ಅವರ ಮುಂದೆ ಹಾಜರುಪಡಿಸಿದ್ದು, 10 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು.

ನ್ಯಾಯಾಲಯವು ನಾಲ್ಕು ದಿನಗಳ ಕಾಲ ಅಮಾನತುಲ್ಲಾ ಖಾನ್ ಅವರನ್ನು ಈಡಿ ಕಸ್ಟಡಿಗೆ ಒಪ್ಪಿಸಿದ್ದು, ಸೆ.6ರಂದು ನ್ಯಾಯಾಲಯದ ಮುಂದೆ ಮತ್ತೆ ಹಾಜರುಪಡಿಸುವಂತೆ ಸೂಚಿಸಿದೆ.

ಓಖ್ಲಾ ವಿಧಾನಸಭಾ ಕ್ಷೇತ್ರದ ಶಾಸಕ ಅಮಾನತುಲ್ಲಾ ಖಾನ್(50) ಅವರನ್ನು ಸೋಮವಾರ ವಕ್ಪ್ಬೋರ್ಡ್ನಲ್ಲಿನ ಅಕ್ರಮಕ್ಕೆ ಸಂಬಂಧಿಸಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ನಿಬಂಧನೆಗಳ ಅಡಿಯಲ್ಲಿ ಅವರ ನಿವಾಸದಿಂದ ಬೆಳಿಗ್ಗೆ 11.20ಕ್ಕೆ ವಶಕ್ಕೆ ತೆಗೆದುಕೊಳ್ಳಲಾಗಿದೆ.

ದಾಳಿಯ ವೇಳೆ ಖಾನ್ ಅವರ ಮುಂದೆ ಕೆಲವು ಪ್ರಶ್ನೆಗಳನ್ನು ಕೇಳಿದ್ದೆವು, ಆದರೆ ಅವರು ಸರಿಯಾಗಿ ಉತ್ತರವನ್ನು ನೀಡದ ಕಾರಣ ಹೆಚ್ಚಿನ ವಿಚಾರಣೆಗಾಗಿ ಬಂಧಿಸಲಾಗಿದೆ, ಪ್ರಕರಣದಲ್ಲಿ ಖಾನ್ ಪ್ರಮುಖ ಆರೋಪಿ ಎಂದು ಈಡಿ ಅಧಿಕಾರಿಗಳು ಹೇಳಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News