ಸಿಪಿಐ(ಎಂ) ಹಿರಿಯ ನಾಯಕ ಸೀತಾರಾಂ ಯೆಚೂರಿ ನಿಧನ

Update: 2024-09-12 10:44 GMT

ಸೀತಾರಾಂ ಯೆಚೂರಿ (Photo: PTI)

ಹೊಸದಿಲ್ಲಿ: ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ರಾಜ್ಯಸಭಾ ಸಂಸದ ಸೀತಾರಾಂ ಯೆಚೂರಿ ಅವರು ನಿಧನರಾಗಿದ್ದಾರೆ.

72 ವರ್ಷದ ಸೀತರಾಂ ಯೆಚೂರಿ ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.

ತೀವ್ರ ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದ ಅವರನ್ನು ಇತ್ತೀಚೆಗೆ ದೆಹಲಿಯ ಏಮ್ಸ್ ನ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿತ್ತು. ಕಳೆದ ಕೆಲವು ದಿನಗಳಿಂದ ಅವರು ವೆಂಟಿಲೇಟರ್ ಸಹಾಯದಿಂದಿದ್ದರು. ನುರಿತ ವೈದ್ಯರ ತಂಡವು ಅವರ ಆರೋಗ್ಯದ ಮೇಲೆ ನಿಗಾ ವಹಿಸಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News