ಮಹಾರಾಷ್ಟ್ರದಲ್ಲಿ ಭಾರಿ ಮಳೆ: ರಸ್ತೆಗೆ ಬಂದ ಮೊಸಳೆ

Update: 2024-07-01 14:45 IST
ಮಹಾರಾಷ್ಟ್ರದಲ್ಲಿ ಭಾರಿ ಮಳೆ: ರಸ್ತೆಗೆ ಬಂದ ಮೊಸಳೆ

Photo:X/@HTMumbai

  • whatsapp icon

ಮುಂಬೈ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮೊಸಳೆಯೊಂದು ರಸ್ತೆಗೆ ಬಂದಿರುವ ಘಟನೆ ಮಹಾರಾಷ್ಟ್ರದ ಕರಾವಳಿ ಜಿಲ್ಲೆಯಾದ ರತ್ನಗಿರಿಯಲ್ಲಿ ನಡೆದಿದೆ. ಈ ದೃಶ್ಯವನ್ನು ವಾಹನ ಸವಾರರು ಚಿತ್ರೀಕರಿಸಿಕೊಂಡಿದ್ದು, ಸದ್ಯ ಈ ವಿಡಿಯೊ ವೈರಲ್ ಆಗಿದೆ.

ಕಾರಿನಲ್ಲಿ ಕುಳಿತಿರುವ ಪ್ರಯಾಣಿಕರೊಬ್ಬರು ಈ ವಿಡಿಯೊ ಚಿತ್ರೀಕರಿಸಿಕೊಂಡಿದ್ದು, ಚಿಪ್ಲುನ್‌ನ ರಸ್ತೆಯೊಂದರಲ್ಲಿ ಮೊಸಳೆ ಕಂಡು ಬಂದಿದೆ. ಮೊಸಳೆಗಳ ಆವಾಸ ಸ್ಥಾನವಾದ ಶಿವ ನದಿಯಿಂದ ಈ ಮೊಸಳೆ ಹೊರ ಬಂದಿರಬಹುದು ಎಂದು ಶಂಕಿಸಲಾಗಿದೆ.

ರತ್ನಗಿರಿ ಜಿಲ್ಲೆಯ ಚಿಪ್ಲುನ್ ಹಾಗೂ ಇನ್ನಿತರ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಭಾರಿ ಮಳೆಯಿಂದಾಗಿ ರಾಜ್ಯದ ನದಿಗಳ ನೀರಿನ ಮಟ್ಟವೂ ಏರಿಕೆಯಾಗತೊಡಗಿದೆ.

ಹವಾಮಾನ ಇಲಾಖೆಯ ಪ್ರಕಾರ, ಜುಲೈ 2ರವರೆಗೆ ರತ್ನಗಿರಿ ಜಿಲ್ಲೆಯಲ್ಲಿ ಮಳೆ ಮುಂದುವರಿಯಲಿದೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News