ಅನರ್ಹತೆ ಕುರಿತು ನಿರ್ಧರಿಸಲು ಮಹಾರಾಷ್ಟ್ರ ಸ್ಪೀಕರ್ ಗೆ ಡಿಸೆಂಬರ್ 31ರವರೆಗೆ ಗಡುವು ನೀಡಿದ ಸುಪ್ರೀಂ ಕೋರ್ಟ್
Update: 2023-10-30 11:53 GMT
ಹೊಸದಿಲ್ಲಿ: ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹಾಗೂ ಎನ್‍ಸಿಪಿ ವರಿಷ್ಠ ಶರದ್ ಪವಾರ್ ಅವರು ಬಂಡಾಯ ಶಾಸಕರ ಅನರ್ಹತೆಗಾಗಿ ಸಲ್ಲಿಸಿರುವ ಅರ್ಜಿಗಳ ಕುರಿತು ಶೀಘ್ರ ನಿರ್ಣಯ ಕೈಗೊಳ್ಳಬೇಕು ಎಂದು ಮಹಾರಾಷ್ಟ್ರ ಸ್ಪೀಕರ್ ರಾಹುಲ್ ನಾರ್ವೇಕರ್ ಅವರಿಗೆ ಸೋಮವಾರ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ ಎಂದು ndtv.com ವರದಿ ಮಾಡಿದೆ.
ಉದ್ಧವ್ ಠಾಕ್ರೆ ಬಣದಿಂದ ಸಲ್ಲಿಕೆಯಾಗಿರುವ ಅರ್ಜಿಯ ಕುರಿತು ಡಿಸೆಂಬರ್ 31ರೊಳಗೆ ಹಾಗೂ ಶರದ್ ಪವಾರ್ ಬಣದಿಂದ ಸಲ್ಲಿಕೆಯಾಗಿರುವ ಅರ್ಜಿಯ ಕುರಿತು ಜನವರಿ 31ರೊಳಗೆ ನಿರ್ಣಯ ಕೈಗೊಳ್ಳಬೇಕು ಎಂದು ನಾರ್ವೇಕರ್ ಅವರಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.