ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಿ: ಕೇಂದ್ರ ಸರಕಾರಕ್ಕೆ ಆದಿತ್ಯ ಠಾಕ್ರೆ ಆಗ್ರಹ

Update: 2024-12-09 11:56 GMT

ಆದಿತ್ಯ ಠಾಕ್ರೆ | PC : PTI 

ಮುಂಬೈ: ಎಂಇಎಸ್ ಕಾರ್ಯಕ್ರಮಕ್ಕೆ ಅವಕಾಶ ನಿರಾಕರಿಸಿದ್ದಕ್ಕೆ ಕರ್ನಾಟಕದ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸುವಂತೆ ಉದ್ಧವ್ ನೇತೃತ್ವದ ಶಿವಸೇನೆ ನಾಯಕ, ವರ್ಲಿ ಶಾಸಕ ಆದಿತ್ಯ ಠಾಕ್ರೆ ಆಗ್ರಹಿಸಿದ್ದಾರೆ.

ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿಗೆ(ಎಂಇಎಸ್) ವಾರ್ಷಿಕ ಸಮಾವೇಶ ನಡೆಸಲು ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಆದಿತ್ಯ ಠಾಕ್ರೆ, ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸುವಂತೆ ಕೇಂದ್ರ ಸರಕಾರಕ್ಕೆ ಒತ್ತಾಯಿಸಿದ್ದಾರೆ ಮತ್ತು ಕರ್ನಾಟಕದಲ್ಲಿನ ಬೆಳವಣಿಗೆಯನ್ನು ಖಂಡಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ಸಂಭ್ರಮಾಚರಣೆಯಲ್ಲಿದೆ. ಆದರೆ, ಬೆಳಗಾವಿಯ ಪರಿಸ್ಥಿತಿಗಳನ್ನು ನೋಡಿ, ನೆರೆಯ ಪ್ರದೇಶದಲ್ಲಿ ವಾಸಿಸುವ ಮರಾಠಿ ಮಾತನಾಡುವ ಜನರ ಹಕ್ಕುಗಳು ಮತ್ತು ಸ್ವಾತಂತ್ರ್ಯಗಳನ್ನು ಹತ್ತಿಕ್ಕಲಾಗುತ್ತಿದೆ ಎಂದು ಹೇಳಿದ್ದಾರೆ.

ಈ ಹಿಂದೆ ಬೆಳಗಾವಿಯ ಎಂಇಎಸ್‌ ಗೆ ಸಾರ್ವಜನಿಕ ಸಭೆ ನಡೆಸಲು ಮತ್ತು ಮಹಾರಾಷ್ಟ್ರದ ನಾಯಕರಿಗೆ ಭಾಗವಹಿಸಲು ಅನುಮತಿ ನೀಡುವಂತೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಿತ್ತು. ಕಾರ್ಯಕ್ರಮಕ್ಕೆ ಅವಕಾಶ ನಿರಾಕರಣೆ ಬಗ್ಗೆ ಪ್ರತಿಕ್ರಿಯಿಸಿದ ಶಿವಸೇನೆ ಶಾಸಕ ಉದಯ್ ಸಾಮಂತ್, ಕರ್ನಾಟಕ ಮಾಡುತ್ತಿರುವುದು ಸರಿಯಲ್ಲ ಎಂದು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News