ಜಮ್ಮು ಕ್ಷೇತ್ರಗಳಲ್ಲಿ ಬಿಜೆಪಿಯ ಮತ ಗಳಿಕೆ ಪ್ರಮಾಣದಲ್ಲಿ ಇಳಿಕೆ

Update: 2024-06-06 16:41 GMT

ಮೆಹಬೂಬಾ ಮುಫ್ತಿ | PC : PTI 

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಎರಡೂ ಲೋಕಸಭಾ ಸ್ಥಾನಗಳನ್ನು ಬಿಜೆಪಿಯು ಸತತ ಮೂರನೇ ಬಾರಿಗೆ ಉಳಿಸಿಕೊಂಡಿದ್ದರೂ, ಅದರ ಮತ ಗಳಿಕೆ 5ರಿಂದ 10 ಶೇಕಡಷ್ಟು ಕುಸಿದಿದೆ. ಅದೇ ವೇಳೆ, ಎರಡೂ ಸ್ಥಾನಗಳನ್ನು ಕಳೆದುಕೊಂಡರೂ, ಕಾಂಗ್ರೆಸ್ ನ ಮತ ಗಳಿಕೆಯಲ್ಲಿ ಹೆಚ್ಚಳವಾಗಿದೆ.

ನ್ಯಾಶನಲ್ ಕಾನ್ಫರೆನ್ಸ್ ಕಣಿವೆಯ ಎರಡು ಸ್ಥಾನಗಳನ್ನು ಗೆದ್ದಿದೆ ಮತ್ತು ಒಂದು ಸ್ಥಾನವನ್ನು ಕಳೆದುಕೊಂಡಿದೆ. ಆದರೆ, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿಯ ಮತಗಳ ಪ್ರಮಾಣ ಕಡಿಮೆಯಾಗಿದೆ.

ಬಾರಾಮುಲ್ಲಾ ಕ್ಷೇತ್ರವನ್ನು ಗೆಲ್ಲುವ ಮೂಲಕ ಸಂಚಲನ ಸೃಷ್ಟಿಸಿರುವ ಜೈಲಿನಲ್ಲಿರುವ ಮಾಜಿ ಶಾಸಕ ಇಂಜಿನಿಯರ್ ರಶೀದ್ ರ ಮತ ಗಳಿಕೆ ಪ್ರಮಾಣ ದುಪ್ಪಟ್ಟಾಗಿದೆ.

ಜಮ್ಮು ಮತ್ತು ಕಾಶ್ಮೀರದ ಐದು ಲೋಕಸಭಾ ಸ್ಥಾನಗಳ ಪೈಕಿ, ಜಮ್ಮು ಮತ್ತು ಉದಾಮ್ಪುರ ಎರಡೂ ಕ್ಷೇತ್ರಗಳನ್ನು ಬಿಜೆಪಿ ಉಳಿಸಿಕೊಂಡಿದೆ. ಅದೇ ವೇಳೆ, ನ್ಯಾಶನಲ್ ಕಾನ್ಫರೆನ್ಸ್ ಶ್ರೀನಗರ ಮತ್ತು ಅನಂತ್ನಾಗ್ ಕ್ಷೇತ್ರಗಳನ್ನು ಉಳಿಸಿಕೊಂಡಿದೆ. ಆದರೆ, ಪಕ್ಷದ ಉಪಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ, ಇಂಜಿನಿಯರ್ ರಶೀದ್ ವಿರುದ್ಧ ಆಘಾತಕಾರಿ ಸೋಲನುಭವಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News