ಮಾನಹಾನಿ ಪ್ರಕರಣ | ಜು.2ರಂದು ರಾಹುಲ್ ಗಾಂಧಿ ಖುದ್ದು ಹಾಜರಾತಿಗೆ ಉತ್ತರಪ್ರದೇಶ ನ್ಯಾಯಾಲಯದ ಆದೇಶ

Update: 2024-06-26 15:30 GMT

 ರಾಹುಲ್ ಗಾಂಧಿ | PC : PTI 

ಸುಲ್ತಾನ್ ಪುರ : ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳ ಆರೋಪದಲ್ಲಿ ದಾಖಲಾಗಿರುವ ಮಾನಹಾನಿ ಪ್ರಕರಣದಲ್ಲಿ ಜು.2ರಂದು ತನ್ನ ಮುಂದೆ ಖುದ್ದಾಗಿ ಹಾಜರಾಗುವಂತೆ ಇಲ್ಲಿಯ ಜನಪ್ರತಿನಿಧಿಗಳ ನ್ಯಾಯಾಲಯವು ಬುಧವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಆದೇಶಿಸಿದೆ.

ದೂರುದಾರರ ಪರ ವಕೀಲ ಸಂತೋಷ್ ಕುಮಾರ್ ಪಾಂಡೆ ಮತ್ತು ರಾಹುಲ್ ಪರ ವಕೀಲ ಕಾಶಿ ಪ್ರಸಾದ್ ಶುಕ್ಲಾ ಅವರ ವಾದಗಳನ್ನು ಆಲಿಸಿದ ಬಳಿಕ ನ್ಯಾಯಾಲಯವು ಈ ಆದೇಶವನ್ನು ಹೊರಡಿಸಿತು.

ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದ ಆರೋಪದಲ್ಲಿ ರಾಹುಲ್ ವಿರುದ್ಧ 2018ರಲ್ಲಿ ಮಾನಹಾನಿ ಪ್ರಕರಣ ದಾಖಲಾಗಿತ್ತು. ಬಿಜೆಪಿ ನಾಯಕ ವಿಜಯ ಮಿಶ್ರಾ ಅವರು ರಾಹುಲ್ ವಿರುದ್ಧ ಮಾನಹಾನಿ ದೂರನ್ನು ಸಲ್ಲಿಸಿದ್ದರು.

ಈ ವರ್ಷದ ಫೆ.20ರಂದು ರಾಹುಲ್ ತನ್ನ ‘ಭಾರತ ಜೋಡೊ ನ್ಯಾಯ ಯಾತ್ರೆ’ಯನ್ನು ಅಮೇಥಿಯಲ್ಲಿ ಸ್ಥಗಿತಗೊಳಿಸಿ ನ್ಯಾಯಾಲಯಕ್ಕೆ ಹಾಜರಾಗಿದ್ದು, ಅವರಿಗೆ ಜಾಮೀನು ಮಂಜೂರು ಮಾಡಲಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News