ದಿಲ್ಲಿ ವಿಧಾನಸಭಾ ಚುನಾವಣೆ | ಮಾದರಿ ನೀತಿ ಸಂಹಿತೆ ಉಲ್ಲಂಘನೆಯ 1,100 ಪ್ರಕರಣ ದಾಖಲು

Update: 2025-02-07 21:52 IST
police

PC : ANI

  • whatsapp icon

ಹೊಸದಿಲ್ಲಿ: ದಿಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘನೆಯ 1,100 ಪ್ರಕರಣಗಳು ದಾಖಲಾಗಿದ್ದು, 35 ಸಾವಿರಕ್ಕೂ ಅಧಿಕ ಮಂದಿಯನ್ನು ದಿಲ್ಲಿ ಪೊಲೀಸರು ಬಂಧಿಸಿದ್ದಾರೆ ಅಥವಾ ವಶಕ್ಕೆ ತೆಗೆದುಕೊಂಡಿದ್ದಾರೆ.

ಮಾದರಿ ನೀತಿ ಸಂಹಿತೆ ಜಾರಿಯಾದ ಜನವರಿ 7ರಿಂದ ಹಿಡಿದು ಫೆಬ್ರವರಿ 6ರ ನಡುವೆ ಈ ಪ್ರಕರಣಗಳನ್ನು ದಾಖಲಿಸಲಾಗಿದೆ. ಪ್ರತಿಬಂಧಕ ಕ್ರಮದ ವಿವಿಧ ನಿಯಮಗಳು ಹಾಗೂ ಇತರ ಕಾಯ್ದೆಗಳಡಿ ಒಟ್ಟು 35,516 ಮಂದಿಯನ್ನು ಬಂಧಿಸಲಾಗಿದೆ ಅಥವಾ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಹೇಳಿಕೆ ತಿಳಿಸಿದೆ.

ಪೊಲೀಸರು 477 ಅಕ್ರಮ ಬಂದೂಕುಗಳನ್ನು ಹಾಗೂ 538 ಕಾಡತೂಸುಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಶಸ್ತ್ರಾಸ್ತ್ರ ಕಾಯ್ದೆಯಡಿ 499 ಮಂದಿಯನ್ನು ಬಂಧಿಸಿದ್ದಾರೆಂದು ಹೇಳಿಕೆ ತಿಳಿಸಿದೆ.

ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು 1,15,103 ಲೀಟರ್ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ ಹಾಗೂ 1426 ಮಂದಿಯನ್ನು ಬಂಧಿಸಿದ್ದಾರೆ.

77.9 ಕೋಟಿ ರೂ. ಮೌಲ್ಯದ 206.712 ಕೆ.ಜಿ. ಮಾದಕದ್ರವ್ಯಗಳನ್ನು ಕೂಡ ಪೊಲೀಸರು ಜಪ್ತಿ ಮಾಡಿದ್ದಾರೆ, 1200ಕ್ಕೂ ಅಧಿಕ ನಿಷೇಧಿತ ಇಂಜೆಕ್ಷನ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, 179 ಮಂದಿಯನ್ನು ಬಂಧಿಸಲಾಗಿದೆ.

ಕಾನೂನು ಅನುಷ್ಠಾನ ಏಜೆನ್ಸಿಗಳು 11.70 ಕೋಟಿ ರೂ. ನಗದನ್ನು ಮು ಟ್ಟುಗೋಲು ಹಾಕಿದ್ದು, 37.39 ಕೆ.ಜಿ. ಬೆಳ್ಳಿಯನ್ನು ವಶಪಡಿಸಿಕೊಂಡಿವೆಯೆಂದು ಹೇಳಿಕೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News