ದಿಲ್ಲಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ಮುಖ್ಯಸ್ಥ ಹಿಂದೇಟು?
Update: 2025-01-03 11:24 GMT
ಹೊಸದಿಲ್ಲಿ: ಬಿಜೆಪಿ ದಿಲ್ಲಿ ಘಟಕದ ಮುಖ್ಯಸ್ಥ ವೀರೇಂದ್ರ ಸಚ್ ದೇವ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮೂಲಗಳನ್ನು ಉಲ್ಲೇಖಿಸಿ NDTV ವರದಿ ಮಾಡಿದೆ.
ದಿಲ್ಲಿ ವಿಧಾನಸಭೆಗೆ ಫೆಬ್ರವರಿಯಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ಬಿಜೆಪಿಯು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇನ್ನೂ ಬಿಡುಗಡೆ ಮಾಡಿಲ್ಲ, ಆದರೆ ಆಮ್ ಆದ್ಮಿ ಪಕ್ಷವು ಮುಂಬರುವ ದಿಲ್ಲಿ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ದಿಲ್ಲಿ ವಿಧಾನಸಭೆ ಚುನಾವಣೆಗೆ ವೀರೇಂದ್ರ ಸಚ್ ದೇವ ಅವರ ಸ್ಪರ್ಧೆಯ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು ಈ ಕುರಿತು ಕೆಲ ದಿನಗಳಲ್ಲಿ ಅಂತಿಮ ನಿರ್ಧಾರ ಹೊರಬರಲಿದೆ ಎಂದು ವರದಿಯಾಗಿದೆ.
ದಿಲ್ಲಿಯಲ್ಲಿ ಆಮ್ ಆದ್ಮಿ ಪಕ್ಷವು 2015 ರಿಂದ ಅಧಿಕಾರದಲ್ಲಿದೆ. ಆದರೆ ಲೋಕಸಭೆ ಚುನಾವಣೆಯಲ್ಲಿ 2014ರಿಂದ ಒಂದೇ ಒಂದು ಸ್ಥಾನವನ್ನು ಗೆಲ್ಲುವಲ್ಲಿ ಎಎಪಿ ವಿಫಲವಾಗಿದೆ ಮತ್ತು ಬಿಜೆಪಿ ದಿಲ್ಲಿಯ ಎಲ್ಲಾ 7 ಸ್ಥಾನಗಳನ್ನು ಗೆದ್ದುಕೊಂಡಿದೆ.