ದಿಲ್ಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ ಸಿಬಿಐ
Update: 2024-07-29 11:04 GMT
ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿ ಪ್ರಕರಣದಲ್ಲಿ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಸೋಮವಾರ ಸಿಬಿಐ ದೋಷಾರೋಪ ಪಟ್ಟಿ ಸಲ್ಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರೌಸ್ ಅವೆನ್ಯೂನಲ್ಲಿರುವ ವಿಶೇಷ ಸಿಬಿಐ ನ್ಯಾಯಾಲಯದೆದುರು ಸಿಬಿಐ ದೋಷಾರೋಪ ಪಟ್ಟಿ ಸಲ್ಲಿಸಿದೆ ಎಂದು ಅವರು ಹೇಳಿದ್ದಾರೆ.