ದಿಲ್ಲಿ ಅಬಕಾರಿ ನೀತಿ ಪ್ರಕರಣ| ಅರವಿಂದ್ ಕೇಜ್ರಿವಾಲ್‌ರ ನ್ಯಾಯಾಂಗ ಬಂಧನದ ಅವಧಿ ಮೇ 20ರವರೆಗೆ ವಿಸ್ತರಿಸಿದ ದಿಲ್ಲಿ ಹೈಕೋರ್ಟ್
Update: 2024-05-07 15:10 IST

ಅರವಿಂದ್ ಕೇಜ್ರಿವಾಲ್ | PC : PTI
ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿಗೆ ಸಂಬಂಧಿಸಿದಂತೆ ದಾಖಲಾಗಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ದಿಲ್ಲಿ ಹೈಕೋರ್ಟ್ ಮೇ 20ರವರೆಗೆ ವಿಸ್ತರಿಸಿದೆ.
ಜಾರಿ ನಿರ್ದೇಶನಾಲಯ ದಾಖಲಿಸಿಕೊಂಡಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿ ಮೀರಿದ್ದರಿಂದ ರೌಸ್ ಅವೆನ್ಯೂ ನ್ಯಾಯಾಲಯಗಳ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಈ ಆದೇಶ ಹೊರಡಿಸಿದ್ದಾರೆ.
ಈ ನಡುವೆ, ಅರವಿಂದ್ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯು ಸುಪ್ರೀಂ ಕೋರ್ಟ್‌ನಲ್ಲಿ ಪ್ರಗತಿಯಲ್ಲಿದೆ.
ಮಾರ್ಚ್ 21ರ ರಾತ್ರಿಯಂದು ಅರವಿಂದ್ ಕೇಜ್ರಿವಾಲ್ ರನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು.