ದಿಲ್ಲಿ ಅಬಕಾರಿ ನೀತಿ ಪ್ರಕರಣ | ನಾಳೆ ಸುಪ್ರೀಂ ನಿಂದ ಕೇಜ್ರಿವಾಲ್ ಅರ್ಜಿ ಕುರಿತ ತೀರ್ಪು ಪ್ರಕಟ
Update: 2024-09-12 15:45 GMT
ಹೊಸದಿಲ್ಲಿ : ಈಗ ರದ್ದುಪಡಿಸಲಾಗಿರುವ ದಿಲ್ಲಿ ಅಬಕಾರಿ ನೀತಿ ಪ್ರಕರಣದಲ್ಲಿ ಸಿಬಿಐ ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸಲ್ಲಿಸಿದ ಅರ್ಜಿಯ ಮೇಲಿನ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಪ್ರಕಟಿಸಲಿದೆ.
ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಹಾಗೂ ಉಜ್ಜಲ್ ಭುಯಾನ್ ಅವರನ್ನು ಒಳಗೊಂಡ ಪೀಠ ಪ್ರಕರಣದ ತೀರ್ಪನ್ನು ಸೆಪ್ಟಂಬರ್ 5ರಂದು ಕಾಯ್ದಿರಿಸಿತ್ತು.
ದಿಲ್ಲಿ ಉಚ್ಚ ನ್ಯಾಯಾಲಯ ಸಿಬಿಐ ಬಂಧನವನ್ನು ಎತ್ತಿ ಹಿಡಿದು ಹಾಗೂ ಕೇಜ್ರಿವಾಲ್ ಅವರು ವಿಚಾರಣಾ ನ್ಯಾಯಾಲಯವನ್ನು ಸಂಪರ್ಕಿಸದ ಕಾರಣಕ್ಕೆ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿ ಆಗಸ್ಟ್ 5ರಂದು ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಅರವಿಂದ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್‌ನ ಮೆಟ್ಟಿಲೇರಿದ್ದರು.