ದಿಲ್ಲಿ ಅಬಕಾರಿ ನೀತಿ ಹಗರಣ | ಒಂಭತ್ತನೇ ದೋಷಾರೋಪ ಪಟ್ಟಿ ಸಲ್ಲಿಸಿದ ಈಡಿ

Update: 2024-06-28 14:15 GMT

PC ; PTI 

ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿ ಪ್ರಕರಣದಲ್ಲಿ ನೂತನ ಹಾಗೂ ಒಂಭತ್ತನೆ ದೋಷಾರೋಪ ಪಟ್ಟಿ ಸಲ್ಲಿಸಿರುವ ಜಾರಿ ನಿರ್ದೇಶನಾಲಯ(ಈಡಿ)ವು, ವಿನೋದ್ ಚೌಹಾಣ್ ಎಂಬ ವ್ಯಕ್ತಿಯನ್ನು ಮತ್ತೊಬ್ಬ ಆರೋಪಿಯನ್ನಾಗಿ ಹೆಸರಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಈ ಪ್ರಕರಣದ ತನಿಖೆಯ ಭಾಗವಾಗಿ ಕೇಂದ್ರೀಯ ತನಿಖಾ ದಳವಾದ ಜಾರಿ ನಿರ್ದೇಶನಾಲಯ(ಈಡಿ)ವು ವಿನೋದ್ ಚೌಹಾಣ್‌ರನ್ನು ಮೇ ತಿಂಗಳಲ್ಲಿ ಬಂಧಿಸಿತ್ತು.

ಅಕ್ರಮ ಹಣ ವರ್ಗಾವಣೆ ನಿಯಂತ್ರಣ ಕಾಯ್ದೆ (PMLA) ನ್ಯಾಯಾಲಯದೆದುರು ನಡೆಯುತ್ತಿರುವ ಈ ಪ್ರಕರಣದಲ್ಲಿ ನೂತನ ಹಾಗೂ ಒಂಭತ್ತನೇ ದೋಷಾರೋಪ ಪಟ್ಟಿಯನ್ನು ಸಲ್ಲಿಸಿರುವ ಜಾರಿ ನಿರ್ದೇಶನಾಲಯ(ಈಡಿ)ವು, ಅದರಲ್ಲಿ ವಿನೋದ್ ಚೌಹಾಣ್‌ರನ್ನು ಆರೋಪಿ ಎಂದು ಹೆಸರಿಸಿದೆ ಎಂದು ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ.

ದಿಲ್ಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಈಡಿ) ಬಂಧಿಸಿದ್ದ 18ನೇ ಆರೋಪಿ ವಿನೋದ್ ಚೌಹಾಣ್ ಆಗಿದ್ದಾರೆ. ಈ ಪ್ರಕರಣದಲ್ಲಿ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯ, ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್, ಬಿಆರ್‌ಎಸ್ ಪಕ್ಷದ ಮುಖ್ಯಸ್ಥ ಮತ್ತು ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ.ಕವಿತಾ ಹಾಗೂ ಹಲವಾರು ಮದ್ಯ ಉದ್ಯಮಿಗಳನ್ನು ಜಾರಿ ನಿರ್ದೇಶನಾಲಯ(ಈಡಿ) ಬಂಧಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News