ನಕಲಿ ಪ್ರಮಾಣ ಪತ್ರ ಪ್ರಕರಣ: ಮಾಜಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ದಿಲ್ಲಿ ಹೈಕೋರ್ಟ್
Update: 2024-12-23 09:53 GMT
ಹೊಸದಿಲ್ಲಿ: ನಕಲಿ ಪ್ರಮಾಣ ಪತ್ರ ನೀಡಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರಿಗೆ ದಿಲ್ಲಿ ಹೈಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದೆ.
ಪೂಜಾ ಖೇಡ್ಕರ್ ಮೀಸಲಾತಿ ಪ್ರಯೋಜನಗಳನ್ನು ಪಡೆಯಲು 2022ರ UPSC ಪರೀಕ್ಷೆಯಲ್ಲಿ ನಕಲಿ ದಾಖಲೆಗಳನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿತ್ತು. ಆದರೆ ಅವರು ತನ್ನ ಮೇಲಿನ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದರು.
ಪೂಜಾ ಖೇಡ್ಕರ್ ವಿರುದ್ಧ ಆರೋಪ ಕೇಳಿ ಬಂದ ಬಳಿಕ ಅವರನ್ನು ಭಾರತೀಯ ಆಡಳಿತ ಸೇವೆಯಿಂದ ಕೇಂದ್ರ ಸರಕಾರ ಬಿಡುಗಡೆ ಮಾಡಿತ್ತು.