ಅರವಿಂದ್ ಕೇಜ್ರಿವಾಲ್ ಗೆ ಮಧ್ಯಂತರ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ನಿರಾಕರಣೆ

Update: 2024-03-21 12:56 GMT

ಹೊಸದಿಲ್ಲಿ : ಅಬಕಾರಿ ನೀತಿ ಪ್ರಕರಣದಲ್ಲಿ ಬಲವಂತದ ಕ್ರಮಕ್ಕೆ ತಡೆ ಕೋರಿ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಪರಿಶೀಲಿಸಿದ ದೆಹಲಿ ಹೈಕೋರ್ಟ್ ಅವರಿಗೆ ರಕ್ಷಣೆ ನೀಡಲು ನಿರಾಕರಿಸಿದೆ.

ದಿಲ್ಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಈಡಿ) ನೀಡಿರುವ ಸಮನ್ಸ್‌ಗಳನ್ನು ಪಾಲಿಸಿದರೆ ಬಂಧಿಸುವುದಿಲ್ಲ ಎಂದು ಜಾರಿ ನಿರ್ದೇಶನಾಲಯದಿಂದ ಭರವಸೆ ನೀಡಬೇಕೆಂದು ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಹೈಕೋರ್ಟ್ ಗೆ ಮನವಿ ಮಾಡಿದ್ದರು. ಆದರೆ ಬಲವಂತದ ಕ್ರಮದಿಂದ ಯಾವುದೇ ಮಧ್ಯಂತರ ರಕ್ಷಣೆ ನೀಡಲು ಸಾಧ್ಯವಿಲ್ಲ ಎಂದು ದೆಹಲಿ ಹೈಕೋರ್ಟ್ ಅವರಿಗೆ ತಿಳಿಸಿತು.

ನಾವು ಎರಡೂ ಕಡೆಯವರ ವಾದ ಪ್ರತಿವಾದ ಆಲಿಸಿದ್ದೇವೆ. ಪ್ರಕರಣದಲ್ಲಿ ಈ ಹಂತದಲ್ಲಿ ರಕ್ಷಣೆ ನೀಡಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿಗಳಾದ ಸುರೇಶ್ ಕುಮಾರ್ ಕೈಟ್ ಮತ್ತು ಮನೋಜ್ ಜೈನ್ ಅವರಿದ್ದ ಪೀಠ ತಿಳಿಸಿತು

Tags:    

Writer - ವಾರ್ತಾಭಾರತಿ

contributor

Editor - musaveer

contributor

Byline - ವಾರ್ತಾಭಾರತಿ

contributor

Similar News