ದಿಲ್ಲಿ: ಐಐಟಿ ವಿದ್ಯಾರ್ಥಿ ಆತ್ಮಹತ್ಯೆ

Update: 2023-11-02 17:11 GMT

ವಾರಣಾಸಿ: ಐಐಟಿ-ದಿಲ್ಲಿಯ 23 ವರ್ಷದ ವಿದ್ಯಾರ್ಥಿಯೋರ್ವ ಪೂರ್ವ ದಿಲ್ಲಿಯ ವಿವೇಕ್ ವಿಹಾರ್ ಪ್ರದೇಶದಲ್ಲಿರುವ ತನ್ನ ನಿವಾಸದಲ್ಲಿ ವೈಟ್ ಲಿಫ್ಟಿಂಗ್ ರಾಡ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಪ್ರಣವ್ ಜೈನ್ ಎಂದು ಗುರುತಿಸಲಾಗಿದೆ. ಈತ ಐಐಟಿ-ದಿಲ್ಲಿಯ ಬಿಟೆಕ್ ನಾಲ್ಕನೇ ವರ್ಷದ ವಿದ್ಯಾರ್ಥಿ. ಆತನ ಹೆತ್ತವರು ಮಂಗಳವಾರ ವಾಕಿಂಗ್ ಮುಗಿಸಿಕೊಂಡು ರಾತ್ರಿ ಮನೆಗೆ ಹಿಂದಿರುಗಿದಾಗ ಪುತ್ರ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂತು.

ಮನೆಯಲ್ಲಿ ಅಳವಡಿಸಲಾಗಿರುವ ವೈಟ್ ಲಿಫ್ಟಿಂಗ್ ರಾಡ್‌ಗೆ ದುಪ್ಪಟದಿಂದ ನೇಣು ಬಿಗಿದುಕೊಂಡು ಪ್ರಣವ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಣವ್ ಕಳೆದ ಕೆಲವು ತಿಂಗಳಿಂದ ಒತ್ತಡ ಹಾಗೂ ಖಿನ್ನತೆಯಿಂದ ಬಳಲುತ್ತಿದ್ದ. ಆತ ಖಿನ್ನತೆಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಎಂದು ಆತನ ತಂದೆ ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುಸೈಡ್ ನೋಟ್ ಪತ್ತೆಯಾಗಿಲ್ಲ. ತನಿಖೆ ಮುಂದುವರಿದಿದೆ ಎಂದು ಅವರು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thouheed

contributor

Byline - ವಾರ್ತಾಭಾರತಿ

contributor

Similar News