ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಎಫ್ಐಆರ್ ದಾಖಲು

Update: 2024-07-07 13:16 GMT

Photo Credit: PTI 

ಹೊಸದಿಲ್ಲಿ: ರಾಷ್ಟ್ರೀಯ ಮಹಿಳಾ ಆಯೋಗದ ಮುಖ್ಯಸ್ಥೆ ರೇಖಾ ಶರ್ಮಾ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದಕ್ಕಾಗಿ ಟಿಎಂಸಿ ಲೋಕಸಭಾ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

X ನಲ್ಲಿ ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಕಾಲ್ತುಳಿತ ಸಂಭವಿಸಿದ ಸ್ಥಳಕ್ಕೆ ಶರ್ಮಾ ಆಗಮಿಸುತ್ತಿರುವ ವೀಡಿಯೊ ಪೋಸ್ಟ್ ಗೆ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವಹೇಳನಕಾರಿ ಕಾಮೆಂಟ್ ಮಾಡಿದ್ದಾರೆ ಎನ್ನಲಾಗಿದೆ. ಬಳಿಕ ಅದನ್ನು ಅವರು ಅಳಿಸಿ ಹಾಕಿದ್ದರು ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Naufal

contributor

Byline - ವಾರ್ತಾಭಾರತಿ

contributor

Similar News