ದಿಲ್ಲಿ | ದಂಪತಿಗಳ ನಡುವೆ ಜಗಳ: ಪತಿಯ ಮರ್ಮಾಂಗವನ್ನೇ ಕತ್ತರಿಸಿದ ಪತ್ನಿ!

Update: 2024-11-02 15:56 GMT

ಸಾಂದರ್ಭಿಕ ಚಿತ್ರ

ಹೊಸದಿಲ್ಲಿ: ದಂಪತಿಗಳ ನಡುವಿನ ಜಗಳ ವಿಕೋಪಕ್ಕೆ ತಿರುಗಿ ತನ್ನ ಪತಿಯ ಮರ್ಮಾಂಗವನ್ನೇ ಪತ್ನಿ ಕತ್ತರಿಸಿರುವ ಘಟನೆ ಉತ್ತರ ದಿಲ್ಲಿಯಲ್ಲಿ ನಡೆದಿದೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ.

ಗಾಯಾಳು ಪತಿಯನ್ನು ಸಫ್ದರ್ ಜಂಗ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ಘಟನೆಯ ಕುರಿತು ಅವರ ಹೇಳಿಕೆಯನ್ನಿನ್ನೂ ದಾಖಲಿಸಿಕೊಳ್ಳಬೇಕಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗಾಯಾಳು ಪತಿಯು ಚೇತರಿಸಿಕೊಂಡ ನಂತರ, ಘಟನೆಯ ಬಗ್ಗೆ ಮತ್ತಷ್ಟು ವಿವರಗಳು ಲಭ್ಯವಾಗಲಿವೆ ಎಂದು ಅವರು ಹೇಳಿದ್ದಾರೆ.

ಸದ್ಯ ಆರೋಪಿ ಮಹಿಳೆ ತಲೆ ಮರೆಸಿಕೊಂಡಿದ್ದು, ಆಕೆಯನ್ನು ಸೆರೆ ಹಿಡಿಯುವ ಪ್ರಯತ್ನಗಳು ಮುಂದುವರಿದಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Safwan

contributor

Byline - ವಾರ್ತಾಭಾರತಿ

contributor

Similar News