ಪುಣೆ| Audi ಕಾರು ಹಿಟ್ ಆ್ಯಂಡ್ ರನ್: ಸ್ವಿಗ್ಗಿ ಡೆಲಿವರಿ ಬಾಯ್ ಮೃತ್ಯು, ಮೂವರಿಗೆ ಗಾಯ

Update: 2024-10-11 06:15 GMT
ಅಕ್ಬರ್ ಶೇಖ್ (Photo credit: news18.com)

ಪುಣೆ: ಐಶಾರಾಮಿ Audi ಕಾರು ಹಲವು ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸ್ವಿಗ್ಗಿ ಡೆಲಿವರಿ ಬಾಯ್ ಸಾವನ್ನಪ್ಪಿದ್ದು, ಇತರ ಮೂವರು ಗಾಯಗೊಂಡಿರುವ ಘಟನೆ ಪುಣೆಯ ಮುಂಧ್ವಾ ಪ್ರದೇಶದಲ್ಲಿ ತಡರಾತ್ರಿ ನಡೆದಿದೆ.

ಅಕ್ಬರ್ ಶೇಖ್ ಮೃತಪಟ್ಟವರು. ಇವರು ಸ್ವಿಗ್ಗಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದರು.

ತಾಡಿ ಗುಟ್ಟಾ ಚೌಕ್‌ನಲ್ಲಿ‌ Audi ಕಾರು, ಮಧ್ಯರಾತ್ರಿ 1.35ರ ಸುಮಾರಿಗೆ ಮೊದಲು ದ್ವಿಚಕ್ರ ವಾಹನವೊಂದಕ್ಕೆ ಢಿಕ್ಕಿ ಹೊಡೆದು ಪರಾರಿಯಾಗಿದೆ. ಘಟನೆಯಲ್ಲಿ ದ್ವಿಚಕ್ರ ವಾಹನದಲ್ಲಿದ್ದ ಮೂವರು ಗಾಯಗೊಂಡಿದ್ದರು. ಆ ಬಳಿಕ ಅದೇ Audi ಕಾರು ಮತ್ತೊಂದು ಬೈಕ್ ಗೆ ಢಿಕ್ಕಿ ಹೊಡೆದು ಪರಾರಿಯಾಗಿದೆ. ಬೈಕ್ ನಲ್ಲಿದ್ದ ಸ್ವಿಗ್ಗಿ ಡೆಲಿವರಿ ಬಾಯ್ ಅಕ್ಬರ್ ಶೇಖ್ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಘಟನೆಯ ನಂತರ ಆರೋಪಿ ಆಯುಷ್ ಪ್ರದೀಪ್ ತಯಾಲ್ ಪರಾರಿಯಾಗಿದ್ದ. ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಆರೋಪಿಯನ್ನು ಹಡಪ್‌ಸರ ಪ್ರದೇಶದಲ್ಲಿ ಬಂಧಿಸಲಾಗಿದೆ. ಈ ಸಂಬಂಧ ಮುಂಡ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪುಣೆಯ ಎಸಿಪಿ ಮನೋಜ್‌ ಪಾಟೀಲ್‌ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News