ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಪಡ್ನವೀಸ್ ಗುರುವಾರ ಪ್ರಮಾಣ ವಚನ
Update: 2024-12-04 06:28 GMT
ಮುಂಬೈ: ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಬಿಜೆಪಿಯ ಹಿರಿಯ ನಾಯಕ ದೇವೇಂದ್ರ ಫಡ್ನವೀಸ್ ಗುರುವಾರ(ಡಿ.5) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಹಾರಾಷ್ಟ್ರ ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಬುಧವಾರ ನಡೆದ ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ದೇವೇಂದ್ರ ಫಡ್ನವೀಸ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಹೇಳಲಾಗಿದೆ. ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಮತ್ತು ಫಡ್ನವೀಸ್ ಉಪಸ್ಥಿತರಿದ್ದರು.
ಮಹಾರಾಷ್ಟ್ರ ಶಾಸಕಾಂಗ ಪಕ್ಷದ ನಾಯಕನನ್ನು ನೇಮಿಸಲು ಬಿಜೆಪಿ ಸೀತಾರಾಮನ್ ಮತ್ತು ರೂಪಾನಿ ಅವರನ್ನು ಕೇಂದ್ರ ವೀಕ್ಷಕರನ್ನಾಗಿ ನೇಮಿಸಿತ್ತು.
ಬುಧವಾರ ಮಧ್ಯಾಹ್ನ 3.30ಕ್ಕೆ ರಾಜ್ಯಪಾಲ ಸಿ ಪಿ ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿ ಮಹಾಯುತಿ ಮೈತ್ರಿಕೂಟವು ಸರ್ಕಾರ ರಚಿಸಲು ಹಕ್ಕು ಮಂಡಿಸಲಿದೆ ಎಂದು ಬಿಜೆಪಿ ನಾಯಕ ಸುಧೀರ್ ಮುಂಗಂಟಿವಾರ್ ಹೇಳಿದ್ದಾರೆ.