ಸರಕಾರಿ ನೌಕರರಿಗೆ ದೀಪಾವಳಿ ʼಗಿಫ್ಟ್ʼ; ತುಟ್ಟಿಭತ್ಯೆ ಶೇ.3ರಷ್ಟು ಹೆಚ್ಚಿಸಿದ ಕೇಂದ್ರ ಸರಕಾರ
Update: 2024-10-16 09:24 GMT
ಹೊಸದಿಲ್ಲಿ: ಕೇಂದ್ರ ಸರಕಾರವು ದೀಪಾವಳಿಗೆ ಮುನ್ನ ತನ್ನ ಒಂದು ಕೋಟಿಗೂ ಹೆಚ್ಚಿನ ನೌಕರರು ಮತ್ತು ಪಿಂಚಣಿದಾರರ ತುಟ್ಟಿಭತ್ಯೆಯನ್ನು ಶೇ.3ರಷ್ಟು ಹೆಚ್ಚಿಸಿದೆ.
ತುಟ್ಟಿಭತ್ಯೆ ಹೆಚ್ಚಳವು ಹಬ್ಬಗಳ ಋತುವಿನ ನಡುವೆ ಕೇಂದ್ರ ಸರಕಾರಿ ಉದ್ಯೋಗಿಗಳಿಗೆ ನೆಮ್ಮದಿಯನ್ನು ನೀಡಿದೆ.
ಹೆಚ್ಚುತ್ತಿರುವ ಬೆಲೆಗಳನ್ನು ಸರಿದೂಗಿಸಲು ಸರಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆಯನ್ನು ನೀಡಲಾಗುತ್ತದೆ. ಕೈಗಾರಿಕಾ ಕಾರ್ಮಿಕರಿಗಾಗಿ ಇತ್ತೀಚಿನ ಗ್ರಾಹಕ ಬೆಲೆ ಸೂಚ್ಯಂಕದ ಆಧಾರದಲ್ಲಿ ಇದನ್ನು ಲೆಕ್ಕ ಹಾಕಲಾಗುತ್ತದೆ.