ಕೋಲ್ಕತ್ತಾ| ವೈದ್ಯರಿಂದ ʼಗೋಬ್ಯಾಕ್ʼ ಘೋಷಣೆ; ಸ್ಥಳದಿಂದ ಕಾಲ್ಕಿತ್ತ ಬಿಜೆಪಿ ಸಂಸದ ಅಭಿಜಿತ್ ಗಂಗೋಪಾಧ್ಯಾಯ

Update: 2024-09-03 13:50 IST
ಕೋಲ್ಕತ್ತಾ| ವೈದ್ಯರಿಂದ ʼಗೋಬ್ಯಾಕ್ʼ ಘೋಷಣೆ; ಸ್ಥಳದಿಂದ ಕಾಲ್ಕಿತ್ತ ಬಿಜೆಪಿ ಸಂಸದ ಅಭಿಜಿತ್ ಗಂಗೋಪಾಧ್ಯಾಯ

Screengrab:X/@ani

  • whatsapp icon

ಕೋಲ್ಕತ್ತಾ: ಬಿಜೆಪಿ ಸಂಸದ, ಮಾಜಿ ಹೈಕೋರ್ಟ್ ನ್ಯಾಯಾಧೀಶ ಅಭಿಜಿತ್ ಗಂಗೋಪಾಧ್ಯಾಯ ವಿರುದ್ಧ ಕೋಲ್ಕತ್ತಾದಲ್ಲಿ ಧರಣಿ ನಿರತ ಕಿರಿಯ ವೈದ್ಯರು 'ಗೋ ಬ್ಯಾಕ್' ಘೋಷಣೆಗಳನ್ನು ಕೂಗಿದ್ದಾರೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ವೈದ್ಯೆಯ ಅತ್ಯಾಚಾರ- ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಗರಪಾಲ್ ವಿನೀತ್ ಗೋಯಲ್ ಅವರ ರಾಜೀನಾಮೆಗೆ ಪ್ರತಿಭಟನಾಕಾರರು ಆಗ್ರಹಿಸಿದ್ದರು.

ಅಭಿಜಿತ್ ಗಂಗೋಪಾಧ್ಯಾಯ ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಭೇಟಿ ಮಾಡಲು ಸ್ಥಳಕ್ಕೆ ತೆರಳಿದ್ದು, ಈ ವೇಳೆ ಗೋ ಬ್ಯಾಕ್ ಘೋಷಣೆಗಳನ್ನು ಕೂಗಲಾಗಿದೆ.

ಬಿಜೆಪಿ ಸಂಸದ ಸ್ಥಳಕ್ಕೆ ಬರುವುದನ್ನು ಗಮನಿಸಿದ ಪ್ರತಿಭಟನಾಕಾರರು ಗೋಬ್ಯಾಕ್ ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದ್ದಾರೆ. ಯಾವುದೇ ರಾಜಕಾರಣಿಗಳು ನಮ್ಮ ಪ್ರತಿಭಟನೆಯಲ್ಲಿ ಭಾಗವಹಿಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಈ ವೇಳೆ ಬಿಜೆಪಿ ಸಂಸದ ಅಭಿಜಿತ್ ಗಂಗೋಪಾಧ್ಯಾಯ ಸ್ಥಳದಿಂದ ತೆರಳಿದ್ದಾರೆ, ನಾನು ಪ್ರತಿಭಟನಾಕರರ ಜೊತೆಗಿರಲು ಬಂದಿದ್ದೇನೆ, ಆದರೆ ಅವರು ನನ್ನನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News