ಬಿಜೆಪಿಯ ತಪ್ಪುಗಳನ್ನು ಆರೆಸ್ಸೆಸ್ ಬೆಂಬಲಿಸುತ್ತದೆಯೇ?: ಮೋಹನ್ ಭಾಗವತ್ ಗೆ ಪತ್ರ ಬರೆದ ಕೇಜ್ರಿವಾಲ್

Update: 2025-01-01 06:56 GMT

ಅರವಿಂದ್ ಕೇಜ್ರಿವಾಲ್ (PTI)

ಹೊಸದಿಲ್ಲಿ: ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಬುಧವಾರ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿದ್ದು, ಬಿಜೆಪಿ ದಿಲ್ಲಿಯಲ್ಲಿ ಮತದಾರರ ಪಟ್ಟಿಯಿಂದ ಎಎಪಿ ಪರ ಮತದಾರರ ಹೆಸರನ್ನು ಅಳಿಸುತ್ತಿದೆ ಮತ್ತು ಹಣ ಹಂಚಿಕೆಯನ್ನು ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ದಿಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ ಆರೆಸ್ಸೆಸ್ ಮುಖ್ಯಸ್ಥರಿಗೆ ಬರೆದ ಪತ್ರದಲ್ಲಿ ಕೇಜ್ರಿವಾಲ್ ಹಲವು ಪ್ರಶ್ನೆಗಳನ್ನು ಕೇಳಿದ್ದು, ಬಿಜೆಪಿ ಮಾಡಿದ ತಪ್ಪುಗಳನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಬೆಂಬಲಿಸುತ್ತಿದೆಯಾ ಎಂದು ಪ್ರಶ್ನಿಸಿದ್ದಾರೆ.

ದಿಲ್ಲಿಯಲ್ಲಿ ಮತಗಳನ್ನು ಖರೀದಿಸಲು ಬಿಜೆಪಿ ನಾಯಕರು ಬಹಿರಂಗವಾಗಿ ಹಣ ಹಂಚುತ್ತಿದ್ದಾರೆ. ಪೂರ್ವಾಂಚಲಿ ಮತ್ತು ದಲಿತ ಸಮುದಾಯದ ಮತದಾರರ ಮತಗಳನ್ನು ದೊಡ್ಡ ಪ್ರಮಾಣದಲ್ಲಿ ಅಳಿಸಲಾಗುತ್ತಿದೆ. ಇದನ್ನು ಆರೆಸ್ಸೆಸ್ ಬೆಂಬಲಿಸುತ್ತದೆಯೇ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಗೆ ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.

70 ಸದಸ್ಯ ಬಲದ ದಿಲ್ಲಿ ವಿಧಾನಸಭೆಗೆ ಫೆಬ್ರವರಿಯಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ಈ ಮಧ್ಯೆ ಮತದಾರರ ಪಟ್ಟಿಯಿಂದ ಎಎಪಿ ಬೆಂಬಲಿಗರ ಹೆಸರನ್ನು ಬಿಜೆಪಿ ಅಳಿಸಿ ಹಾಕುತ್ತಿದೆ ಎಂದು ಕೇಜ್ರಿವಾಲ್‌ ಸೇರಿದಂತೆ ಎಎಪಿ ನಾಯಕರು ಆರೋಪಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News