ಎಕ್ಸಿಟ್ ಪೋಲ್ ಪ್ರಸಾರ ಮಾಡದಂತೆ ಚುನಾವಣಾ ಆಯೋಗದಿಂದ ನಿಷೇಧ
Update: 2024-04-19 18:27 GMT
ಹೊಸದಿಲ್ಲಿ : ಲೋಕಸಭೆ ಮತ್ತು ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಎಪ್ರಿಲ್ 19ರ ಬೆಳಿಗ್ಗೆ 7.00 ರಿಂದ ಜೂನ್ 1 ರ ಸಂಜೆ 6.30 ರ ನಡುವೆ ಎಕ್ಸಿಟ್ ಪೋಲ್‌ಗಳನ್ನು ನಡೆಸುವುದು, ಪ್ರಕಟಿಸುವುದು ಅಥವಾ ಪ್ರಚಾರ ಮಾಡುವುದಕ್ಕೆ ಭಾರತೀಯ ಚುನಾವಣಾ ಆಯೋಗವು ನಿಷೇಧಿಸಿದೆ.
ಪ್ರಜಾಪ್ರತಿನಿಧಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ, ಅಭಿಪ್ರಾಯ ಸಂಗ್ರಹದ ಫಲಿತಾಂಶಗಳು ಅಥವಾ ಇತರ ಸಮೀಕ್ಷೆಯ ಫಲಿತಾಂಶಗಳನ್ನು ಯಾವುದೇ ಮಾಧ್ಯಮಗಳಲ್ಲಿ ಪ್ರಕಟಿಸುವುದನ್ನು ನಿಷೇಧಿಸಿದೆ.
ಲೋಕಸಭೆ ಚುನಾವಣೆಯ ಜೊತೆಗೆ ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಒಡಿಶಾ ಮತ್ತು ಸಿಕ್ಕಿಂ ವಿಧಾನಸಭೆಗಳಿಗೆ ಚುನಾವಣೆ ನಡೆಯಲಿದೆ. ಈ ಅವಧಿಯಲ್ಲಿ 12 ರಾಜ್ಯಗಳ 25 ವಿಧಾನಸಭಾ ಕ್ಷೇತ್ರಗಳಿಗೆ ಪ್ರತ್ಯೇಕವಾಗಿ ಉಪಚುನಾವಣೆಯೂ ನಡೆಯುತ್ತಿದೆ.