ಅರವಿಂದ್ ಕೇಜ್ರಿವಾಲ್ ಗೆ 9ನೇ ಸಮನ್ಸ್ ಜಾರಿಗೊಳಿಸಿದ ಈಡಿ

Update: 2024-03-17 06:08 GMT

 ಅರವಿಂದ್ ಕೇಜ್ರಿವಾಲ್ | Photo: PTI  

ಹೊಸ ದಿಲ್ಲಿ: ದಿಲ್ಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ED)ವು ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ 9ನೇ ಸಮನ್ಸ್ ಜಾರಿಗೊಳಿಸಿದ್ದು, ತನ್ನೆದುರು ಮಾರ್ಚ್ 21ರಂದು ಹಾಜರಾಗುವಂತೆ ಸೂಚಿಸಿದೆ. ಇದಕ್ಕೂ ಮುನ್ನ ಕೇಜ್ರಿವಾಲ್ ಜಾರಿ ನಿರ್ದೇಶನಾಲಯ ಜಾರಿಗೊಳಿಸಿದ್ದ ಎಂಟು ಸಮನ್ಸ್ ಗಳಿಗೆ ಗೈರಾಗಿದ್ದರು.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿಗೊಳಿಸಲಾಗಿದ್ದ ಸಮನ್ಸ್ ಗಳಿಗೆ ಅರವಿಂದ್ ಕೇಜ್ರಿವಾಲ್ ನಿರಂತರವಾಗಿ ಗೈರಾಗಿದ್ದಾರೆ ಎಂದು ಜಾರಿ ನಿರ್ದೇಶನಾಲಯವು ದಾಖಲಿಸಿದ್ದ ದೂರಿಗೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಅವರಿಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದ ನಂತರ ಈ ಬೆಳವಣಿಗೆ ನಡೆದಿದೆ.

ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ದಿವ್ಯಾ ಮಲ್ಹೋತ್ರಾ ಅವರು ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು ಮಾಡಿ, ಇದು ಜಾಮೀನು ದೊರೆಯಬಹುದಾದ ಅಪರಾಧ ಎಂದು ಹೇಳಿದ್ದರು. ಇದಲ್ಲದೆ ಜಾರಿ ನಿರ್ದೇಶನಾಲಯವು ಸಲ್ಲಿಸಿರುವ ದೂರಿನ ದಾಖಲೆಗಳನ್ನು ಅರವಿಂದ್ ಕೇಜ್ರಿವಾಲ್ ಗೆ ಹಸ್ತಾಂತರಿಸಬೇಕು ಎಂದು ಜಾರಿ ನಿರ್ದೇಶನಾಲಯಕ್ಕೆ ಸೂಚಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News