ಮಹಾಯುತಿ ಮೈತ್ರಿಕೂಟದಿಂದ ಯಾರು ಮುಂದಿನ ಮುಖ್ಯಮಂತ್ರಿಯಾಗುತ್ತಾರೆ ಎಂಬುದು ಮುಖ್ಯವಲ್ಲ: ಏಕನಾಥ್ ಶಿಂದೆ

Update: 2024-11-15 17:48 IST
Photo of Eknath Shinde

ಏಕನಾಥ್ ಶಿಂದೆ |  PTI

  • whatsapp icon

ಥಾಣೆ: ಮಹಾಯುತಿ ಸರಕಾರ ಮತ್ತೆ ಸುಲಭವಾಗಿ ಅಧಿಕಾರಕ್ಕೆ ಮರಳುತ್ತದೆ ಎಂದು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೂ ಮುನ್ನ ವಿಶ್ವಾಸ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಏಕನಾಥ್ ಶಿಂದೆ, ಮುಂದಿನ ಮುಖ್ಯಮಮತ್ರಿ ಯಾರಾಗುತ್ತಾರೆ ಎಂಬುದು ಮೂರು ಮಿತ್ರಪಕ್ಷಗಳ ಪಾಲಿಗೆ ಪ್ರಮುಖ ವಿಷಯವೇ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಬಾರಿಯ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯನ್ನು ಬಿಜೆಪಿ-ಶಿವಸೇನೆ-ಎನ್ಸಿಪಿ ಮೈತ್ರಿಕೂಟವು ಮುಖ್ಯಮಂತ್ರಿ ಏಕನಾಥ್ ಶಿಂದೆ ನೇತೃತ್ವದಲ್ಲಿ ಎದುರಿಸುತ್ತಿದೆ.

ಮಹಾಯುತಿಯ ಮುಖ್ಯ ಗುರಿ ಮಹಾವಿಕಾಸ್ ಅಘಾಡಿ ಮೈತ್ರಿಕೂಟವನ್ನು ಅಧಿಕಾರದಿಂದ ಹೊರಗಿಡುವುದಾಗಿದೆ ಎಂದು ಅವರು ಹೇಳಿದ್ದಾರೆ.

“ನಮ್ಮ ಪ್ರಯತ್ನವು ಮಹಾವಿಕಾಸ್ ಅಘಾಡಿ ಮೈತ್ರಿಕೂಟವು ಅಧಿಕಾರಕ್ಕೆ ಬಾರದಂತೆ ತಡೆಯುವುದಾಗಿದೆ. ಅವರೇನಾದರೂ ಅಧಿಕಾರಕ್ಕೆ ಬಂದರೆ, ರಾಜ್ಯವನ್ನು 25 ವರ್ಷಗಳಷ್ಟು ಹಿಂದಕ್ಕೆ ತೆಗೆದುಕೊಂಡು ಹೋಗುತ್ತಾರೆ” ಎಂದು ಕಾಂಗ್ರೆಸ್, ಶರದ್ ಪವಾರ್ ನೇತೃತ್ವದ ಎನ್ಸಿಪಿ ಹಾಗೂ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಯನ್ನು ಒಳಗೊಂಡಿರುವ ಮಹಾವಿಕಾಸ್ ಅಘಾಡಿ ಮೈತ್ರಿಕೂಟದ ಕುರಿತು ಶಿಂದೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಎರಡೂವರೆ ವರ್ಷಗಳ ಹಿಂದೆ ಶಿವಸೇನೆಯ ನಾಯಕತ್ವವನ್ನು ತಮ್ಮ ಹಿಡಿತಕ್ಕೆ ತೆಗೆದುಕೊಂಡು, ಕಳೆದ ಎರಡೂವರೆ ವರ್ಷಗಳಿಂದ ರಾಜ್ಯದ ಮುಖ್ಯಮಂತ್ರಿಯಾಗಿರುವ ಏಕನಾಥ್ ಶಿಂದೆ, ಅಭಿವೃದ್ಧಿ ಮತ್ತು ಸಾಮಾಜಿಕ ಕಲ್ಯಾಣದತ್ತ ನಮ್ಮ ಮೈತ್ರಿಕೂಟದ ಗಮನ ಕೇಂದ್ರೀಕೃತವಾಗಿದೆ ಎಂದು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News