ಏಕನಾಥ್ ಶಿಂಧೆ ಅಲಭ್ಯ!: ಮುಖ್ಯಮಂತ್ರಿ ಆಯ್ಕೆ ಕುರಿತ ಮಹಾಯುತಿ ಮೈತ್ರಿಕೂಟದ ನಿರ್ಣಾಯಕ ಸಭೆ ರದ್ದು

Update: 2024-11-29 10:12 GMT

ಏಕನಾಥ್ ಶಿಂಧೆ (Photo: PTI)

ಮಹಾರಾಷ್ಟ್ರ: ನಿಯೋಜಿತ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಅನಿರೀಕ್ಷಿತವಾಗಿ ಸತಾರಾ ಜಿಲ್ಲೆಯ ತಮ್ಮ ಗ್ರಾಮಕ್ಕೆ ತೆರಳಿದ ಹಿನ್ನೆಲೆ ಶುಕ್ರವಾರ ನಡೆಯಬೇಕಿದ್ದ ಮಹಾಯುತಿ ಮೈತ್ರಿಕೂಟದ ನಿರ್ಣಾಯಕ ಸಭೆ ರದ್ದುಗೊಂಡಿದ್ದು, ಹೊಸ ಮಹಾರಾಷ್ಟ್ರ ಸರ್ಕಾರದ ರಚನೆಯು ಮುಂದೂಡಲ್ಪಟ್ಟಿದೆ.

ಮುಖ್ಯಮಂತ್ರಿಯ ಆಯ್ಕೆ ಕುರಿತು ಬಿಜೆಪಿಯ ದೇವೇಂದ್ರ ಫಡ್ನವೀಸ್ ಮತ್ತು ಎನ್ಸಿಪಿ ನಾಯಕ ಅಜಿತ್ ಪವಾರ್ ಅವರೊಂದಿಗೆ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಮಾತುಕತೆಯ ಬಳಿಕ ಶಿವಸೇನೆಯ ಏಕನಾಥ್ ಶಿಂಧೆ ಬೆಳಿಗ್ಗೆ ಮುಂಬೈಗೆ ವಾಪಾಸ್ಸಾಗಿದ್ದರು.

ದಿಲ್ಲಿಯಲ್ಲಿ ನಡೆದ ಸಭೆಯ ಬಗ್ಗೆ ಏಕನಾಥ್ ಶಿಂಧೆ ಧನಾತ್ಮಕ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರೂ, ಶಿಂಧೆ ಅವರ ಅನಿರೀಕ್ಷಿತ ಪ್ರಯಾಣದಿಂದ ಶುಕ್ರವಾರ ನಡೆಯಬೇಕಿದ್ದ ಅಧಿಕಾರ ಹಂಚಿಕೆಯ ಕುರಿತ ಮಾತುಕತೆಗಳು ಸ್ಥಗಿತಗೊಂಡಿದೆ.

ಏಕನಾಥ್ ಶಿಂಧೆ ಶನಿವಾರ ಮುಂಬೈಗೆ ಮರಳುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿದೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 132 ಸ್ಥಾನಗಳಲ್ಲಿ ಗೆಲುವನ್ನು ಸಾಧಿಸಿದೆ. ದೇವೇಂದ್ರ ಫಡ್ನವೀಸ್ ಅವರು ಮುಖ್ಯಮಂತ್ರಿಯಾಗುವುದು ಬಹುತೇಕ ಖಚಿತವಾಗಿದೆ. ಮಹಾಯುತಿಯ ಮೈತ್ರಿ ಪಕ್ಷಗಳಾದ ಶಿಂಧೆ ನೇತೃತ್ವದ ಶಿವಸೇನೆಗೆ ಮತ್ತು ಅಜಿತ್ ಪವಾರ್ ನೇತೃತ್ವದ ಎನ್ ಸಿಪಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗುತ್ತದೆ ಎಂದು ಹೇಳಲಾಗುತ್ತಿದೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News