ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ : ಮಾಜಿ ಸಂಸದೆ ಜಯಪ್ರದಾ ಅವರನ್ನು ಬಂಧಿಸಲು ರಾಂಪುರ ನ್ಯಾಯಾಲಯ ಆದೇಶ

Update: 2024-02-14 12:20 GMT

ಜಯಪ್ರದಾ Photo : indiatoday.in

ಲಕ್ನೋ : ಏಳು ಬಾರಿ ಸಮನ್ಸ್ ನೀಡಿದರೂ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನಲೆಯಲ್ಲಿ ಉತ್ತರ ಪ್ರದೇಶದ ರಾಂಪುರದಲ್ಲಿರುವ ಜನಪ್ರತಿನಿಧಿಗಳ ನ್ಯಾಯಾಲಯವು ರಾಜ್ಯಸಭೆಯ ಮಾಜಿ ಸಂಸದೆ ಮತ್ತು ನಟಿ ಜಯಪ್ರದಾ ಅವರ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ. ಜಯಪ್ರದಾ ಅವರನ್ನು ಬಂಧಿಸುವಂತೆ ಬಂಧಿಸುವಂತೆ ರಾಂಪುರ ಪೊಲೀಸ್ ವರಿಷ್ಠಾಧಿಕಾರಿಗೆ ನ್ಯಾಯಾಲಯ ಸೂಚಿಸಿದೆ ಎಂದು indiatoday.in ವರದಿ ಮಾಡಿದೆ.

2019 ರ ಲೋಕಸಭೆ ಚುನಾವಣೆಯಲ್ಲಿ ರಾಂಪುರದಿಂದ ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದ ಜಯಪ್ರದಾ ಅವರ ಮೇಲೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿರುವ ಆರೋಪವಿತ್ತು. ಒಂದು ಪ್ರಕರಣ ಕ್ಯಾಮ್ರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದರೆ, ಇನ್ನೊಂದು ಸ್ವರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು ಎಂದು ತಿಳಿದು ಬಂದಿದೆ. ಪ್ರಾಸಿಕ್ಯೂಷನ್ ಸಾಕ್ಷಿಯ ವಿಚಾರಣೆಯನ್ನು ಪೂರ್ಣಗೊಳಿಸಿರುವುದರಿಂದ, ಜಯಪ್ರದಾ ಅವರ ಹೇಳಿಕೆಯನ್ನು ಕ್ರಿಮಿನಲ್ ಪ್ರೊಸೀಜರ್ ಕೋಡ್ (ಸಿಆರ್‌ಪಿಸಿ) ಸೆಕ್ಷನ್ 313 ರ ಅಡಿಯಲ್ಲಿ ದಾಖಲಿಸಬೇಕಾಗಿರುವುದರಿಂದ ಜಯಪ್ರದಾಗೆ ಸಮನ್ಸ್ ನೀಡಲಾಗಿತ್ತು ಎನ್ನಲಾಗಿದೆ.

ಪ್ರಕರಣದ ಮುಂದಿನ ವಿಚಾರಣೆ ಫೆಬ್ರವರಿ 27ಕ್ಕೆ ನಡೆಯಲಿದೆ.

Tags:    

Writer - ವಾರ್ತಾಭಾರತಿ

contributor

Editor - musaveer

contributor

Byline - ವಾರ್ತಾಭಾರತಿ

contributor

Similar News