ತಮಿಳುನಾಡಿನಲ್ಲಿ ರಾಹುಲ್ ಗಾಂಧಿ ಹೆಲಿಕಾಪ್ಟರ್ ತಪಾಸಣೆ ನಡೆಸಿದ ಚುನಾವಣಾಧಿಕಾರಿಗಳು
Update: 2024-04-15 07:39 GMT
Pನೀಲಗಿರೀಸ್ (ತಮಿಳುನಾಡು): ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅನ್ನು ಸೋಮವಾರ ಚುನಾವಣಾಧಿಕಾರಿಗಳು ತಪಾಸಣೆ ನಡೆಸಿದ್ದಾರೆ ಎಂದು ವರದಿಯಾಗಿದೆ.
ನೀಲಗಿರೀಸ್ ನಲ್ಲಿ ಹೆಲಿಕಾಪ್ಟರ್ ಇಳಿದಾಗ ಕಾರ್ಯನಿರತ ತಪಾಸಣಾ ಅಧಿಕಾರಿಗಳು ಹೆಲಿಕಾಪ್ಟರ್ ಅನ್ನು ತಪಾಸಣೆ ನಡೆಸಿದರು ಎಂದು ಪೊಲೀಸರು ತಿಳಿಸಿದ್ದಾರೆ.
ರಾಹುಲ್ ಗಾಂಧಿ ಅವರು ತಾವು ಸ್ಪರ್ಧಿಸುತ್ತಿರುವ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಸಾರ್ವಜನಿಕ ಸಭೆಗಳು ಸೇರಿದಂತೆ ಹಲವಾರು ಚುನಾವಣಾ ಚಟುವಟಿಕೆಗಳಲ್ಲಿ ಭಾಗವಹಿಸಲು ಇಲ್ಲಿಂದ ತೆರಳುವವರಿದ್ದರು.
ಎಪ್ರಿಲ್ 26ರಂದು ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಚುನಾವಣೆಯಲ್ಲಿ ಸತತ ಎರಡನೆ ಬಾರಿ ಕ್ಷೇತ್ರವನ್ನು ಪ್ರತಿನಿಧಿಸಲು ಅವರು ಅಲ್ಲಿಂದ ಸ್ಪರ್ಧಿಸುತ್ತಿದ್ದಾರೆ.