ಜಾರ್ಖಂಡ್ | ಭದ್ರತಾ ಪಡೆಗಳಿಂದ ಜಂಟಿ ಕಾರ್ಯಾಚರಣೆ : ಓರ್ವ ನಕ್ಸಲ್ ಹತ್ಯೆ
Update: 2025-01-29 04:56 GMT
![ಜಾರ್ಖಂಡ್ | ಭದ್ರತಾ ಪಡೆಗಳಿಂದ ಜಂಟಿ ಕಾರ್ಯಾಚರಣೆ : ಓರ್ವ ನಕ್ಸಲ್ ಹತ್ಯೆ Photo of security forces](https://www.varthabharati.in/h-upload/2025/01/29/1500x900_1318708-naxalencounter.webp)
ಸಾಂದರ್ಭಿಕ ಚಿತ್ರ (ANI)
ರಾಂಚಿ : ಜಾರ್ಖಂಡ್ ನ ಪಶ್ಚಿಮ ಸಿಂಗ್ ಭೂಮ್ ಜಿಲ್ಲೆಯ ಚೈಬಾಸಾದಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಸ್ಥಳದಲ್ಲಿ ಓರ್ವ ನಕ್ಸಲ್ ಮೃತದೇಹ ಪತ್ತೆಯಾಗಿದೆ. ಇನ್ನು ಕೆಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಜಾರ್ಖಂಡ್ ಪೊಲೀಸರು, 209 ಕೋಬ್ರಾ ಬೆಟಾಲಿಯನ್ ಸಿಬ್ಬಂದಿಗಳನ್ನು ಒಳಗೊಂಡ ಭದ್ರತಾ ಪಡೆಗಳ ತಂಡ ಜಂಟಿಯಾಗಿ ನಕ್ಸಲ್ ವಿರೋಧಿ ಕಾರ್ಯಚರಣೆಯಲ್ಲಿ ತೊಡಗಿದ್ದವು. ಸ್ಥಳದಿಂದ ಎರಡು INSAS ರೈಫಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಭೂಮ್ ಜಿಲ್ಲೆಯ ಚೈಬಾಸಾದಲ್ಲಿ ಕಾರ್ಯಾಚರಣೆ ಮುಂದುವರಿದಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ.