ಪ್ರತಿಪಕ್ಷಗಳೂ NDA ಅಧಿಕಾರಕ್ಕೆ ಮರಳುತ್ತದೆ ಎಂದು ನಂಬಿವೆ: ಪ್ರಧಾನಿ ಮೋದಿ

Update: 2024-04-12 06:56 GMT

ಪ್ರಧಾನಿ ನರೇಂದ್ರ ಮೋದಿ (Photo: PTI)

ಹೊಸದಿಲ್ಲಿ: ಲೋಕಸಭೆಯಲ್ಲಿನ ಸತತ ಎರಡು ಬಾರಿಯ ಬಹುಮತವನ್ನು ಬಿಜೆಪಿಯು ದೇಶವನ್ನು ಬಲಿಷ್ಠಗೊಳಿಸಲು ಬಳಸಿದರೆ, ಕಾಂಗ್ರೆಸ್ ಪಕ್ಷವು ತನ್ನ ದಶಕಗಳ ಕಾಲದ ಬಹುಮತವನ್ನು ಕುಟುಂಬವನ್ನು ಬಲಿಷ್ಠಗೊಳಿಸಲು ಬಳಸಿತು ಎಂದು ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ವಿರೋಧ ಪಕ್ಷಗಳೂ ಕೂಡಾ ನನ್ನ ಸರಕಾರವು ಮೂರನೆಯ ಅವಧಿಗೆ ಅಧಿಕಾರಕ್ಕೆ ಮರಳುತ್ತದೆ ಎಂದು ನಂಬಿವೆ ಎಂದು ಅವರು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

‘ಹಿಂದೂಸ್ತಾನ್’ಗೆ ಸಂದರ್ಶನ ನೀಡಿರುವ ಪ್ರಧಾನಿ ಮೋದಿ, ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ವಿರೋಧ ಪಕ್ಷಗಳನ್ನು ಗುರಿಯಾಗಿಸಿಕೊಂಡು ಬಳಸಲಾಗುತ್ತಿದೆ ಎಂದು ಭಾರಿ ಆರೋಪ ಹಾಗೂ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ ಭ್ರಷ್ಟಾಚಾರದ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.

ಬಿಜೆಪಿ ಆಡಳಿತಾರೂಢವಾಗಿರುವ ರಾಜ್ಯಗಳಲ್ಲೂ ಭ್ರಷ್ಟಾಚಾರದ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

“ಜಾರಿ ನಿರ್ದೇಶನಾಲಯವು ತನಿಖೆ ನಡೆಸುತ್ತಿರುವ ಭ್ರಷ್ಟಾಚಾರ ಪ್ರಕರಣಗಳ ಪೈಕಿ ಕೇವಲ ಶೇಕಡಾ ಮೂರರಷ್ಟು ಮಂದಿ ಮಾತ್ರ ರಾಜಕೀಯದೊಂದಿಗೆ ಗುರುತಿಸಿಕೊಂಡಿದ್ದಾರೆ. ಉಳಿದ ಶೇ. 97ರಷ್ಟು ಪ್ರಕರಣಗಳು ಅಧಿಕಾರಿಗಳು ಹಾಗೂ ಕ್ರಿಮಿನಲ್ ಗಳಿಗೆ ಸಂಬಂಧಿಸಿವೆ. ಭ್ರಷ್ಟ ವ್ಯವಸ್ಥೆಯಿಂದ ಲಾಭ ಪಡೆದಿರುವವರು ಮಾತ್ರ ಇದರ ವಿರುದ್ಧ ಅಳುತ್ತಿದ್ದಾರೆ ಹಾಗೂ ತಪ್ಪು ಚಿತ್ರಣವನ್ನು ಜನರ ಮುಂದಿಡುತ್ತಿದ್ದಾರೆ” ಎಂದು ಭ್ರಷ್ಟಾಚಾರದ ವಿರುದ್ಧದ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News