ಕೇರಳ ಬಿಜೆಪಿ ಮುಖ್ಯಸ್ಥರಾಗಿ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಆಯ್ಕೆ
Update: 2025-03-24 13:31 IST

ರಾಜೀವ್ ಚಂದ್ರಶೇಖರ್ (Photo: PTI)
ತಿರುವನಂತಪುರಂ: ಕೇಂದ್ರದ ಮಾಜಿ ಸಚಿವ ರಾಜೀವ್ ಚಂದ್ರಶೇಖರ್ ಅವರು ಸೋಮವಾರ ಕೇರಳ ಬಿಜೆಪಿ ಮುಖ್ಯಸ್ಥರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಹುದ್ದೆಗೆ ಅವರು ನಾಮಪತ್ರ ಸಲ್ಲಿಸಿದ ಏಕೈಕ ಅಭ್ಯರ್ಥಿಯಾಗಿದ್ದರು.
ಬಿಜೆಪಿ ರಾಜ್ಯ ಸಮಿತಿ ಸಭೆಯಲ್ಲಿ ಕೇಂದ್ರ ಸಚಿವ, ಕೇರಳ ಬಿಜೆಪಿ ಉಸ್ತುವಾರಿ ಪ್ರಹ್ಲಾದ್ ಜೋಶಿ ಅವರು ರಾಜೀವ್ ಚಂದ್ರಶೇಖರ್ ಆಯ್ಕೆಯನ್ನು ಅಧಿಕೃತವಾಗಿ ಘೋಷಿಸಿದರು.