ಅಬಕಾರಿ ನೀತಿಯಲ್ಲಿ ಭ್ರಷ್ಟಾಚಾರ ಪ್ರಕರಣ: ಮನೀಶ್ ಸಿಸೋಡಿಯಾಗೆ ಜಾಮೀನು ನಿರಾಕರಣೆ

Update: 2023-07-03 21:47 IST
ಅಬಕಾರಿ ನೀತಿಯಲ್ಲಿ ಭ್ರಷ್ಟಾಚಾರ ಪ್ರಕರಣ: ಮನೀಶ್ ಸಿಸೋಡಿಯಾಗೆ ಜಾಮೀನು ನಿರಾಕರಣೆ

Manish Sisodia| Photo: PTI

  • whatsapp icon

ಹೊಸದಿಲ್ಲಿ: ದಿಲ್ಲಿಯಲ್ಲಿ ಈಗ ರದ್ದುಪಡಿಸಲಾಗಿರುವ ಅಬಕಾರಿ ನೀತಿಯಲ್ಲಿ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ದಾಖಲಿಸಿದ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ಅವರಿಗೆ ದಿಲ್ಲಿ ಉಚ್ಚ ನ್ಯಾಯಾಲಯ ಸೋಮವಾರ ಜಾಮೀನು ನೀಡಲು ನಿರಾಕರಿಸಿದೆ.

‌ಸಿಸೋಡಿಯಾ ಅವರಿಗೆ ಸಕಾರಣಕ್ಕೆ ವಿಶೇಷ ನ್ಯಾಯಾಧೀಶರು ಜಾಮೀನು ನಿರಾಕರಿಸಿ ಆದೇಶ ನೀಡಿದ್ದಾರೆ ಎಂದು ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ ಹೇಳಿದರು. ಸಿಸೋಡಿಯಾ ಅವರು ಈ ಹಂತದಲ್ಲಿ ಜಾಮೀನು ಪಡೆಯಲು ಅರ್ಹರಲ್ಲ ಎಂದು ನ್ಯಾಯಮೂರ್ತಿ ತಿಳಿಸಿದರು.

ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಸಿಸೋಡಿಯಾ ಅವರನ್ನು ಮೊದಲು ಫೆಬ್ರವರಿ 26ರಂದು ಬಂಧಿಸಿತ್ತು. ಅನಂತರ ಇದೇ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಸಿಸೋಡಿಯಾ ಅವರನ್ನು ಮಾರ್ಚ್ 9ರಂದು ಬಂಧಿಸಿತ್ತು. ಪ್ರಸ್ತುತ ಸಿಸೋಡಿಯಾ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಜಾರಿ ನಿರ್ದೇಶನಾಲಯದ ಪ್ರಕಾರ ತಥಾಕಥಿತ ಸೌತ್ ಗ್ರೂಪ್ನ ಸದಸ್ಯರು ಆಮ್ ಆದ್ಮಿ ಪಕ್ಷದ ನಾಯಕರಿಗೆ ಉದ್ಯಮಿ ವಿಜಯ್ ನಾಯರ್ ಮೂಲಕ ಕನಿಷ್ಠ 100 ಕೋ. ರೂ. ಲಂಚ ನೀಡಿದ್ದಾರೆ.

ಇದಕ್ಕೆ ಪ್ರತಿಯಾಗಿ ಸೌತ್ ಗ್ರೂಪ್ ಮದ್ಯದ ಸಗಟು ವ್ಯವಹಾರ ಹಾಗೂ ಹಲವು ಚಿಲ್ಲರೆ ವಲಯಗಳಲ್ಲಿ ಅಬಾಧಿತ ಸೌಲಭ್ಯ ಹಾಗೂ ಪಾಲುದಾರಿಕೆ ಪಡೆದುಕೊಂಡಿತು ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ.

ದಿಲ್ಲಿ ಉಚ್ಚ ನ್ಯಾಯಾಲಯ ಸೋಮವಾರ ಹೈದರಾಬಾದ್ ಮೂಲದ ಉದ್ಯಮಿಗಳಾದ ಅಭಿಷೇಕ್ ಬೊನಪಲ್ಲಿ ಹಾಗೂ ಬಿನೋಯ್ ಬಾಬು, ಫ್ರೆಂಚ್ ವೈನ್ ಆ್ಯಂಡ್ ಸ್ಪಿರಿಟ್ ಕಂಪೆನಿಯ ಜನರಲ್ ಮ್ಯಾನೇಜರ್ ಪೆರ್ನೋಡ್ ರಿಕಾರ್ಡ್ನೊಂದಿಗೆ ವಿಜಯ್ ನಾಯರ್ ಅವರ ಜಾಮೀನು ಅರ್ಜಿಗಳನ್ನು ತಿರಸ್ಕರಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News