ರೈತರ ಪ್ರತಿಭಟನಾ ಮೆರವಣಿಗೆ: ಗಡಿಗಳ ಬಂದ್ ಹಾಗೂ ಅಂತರ್ಜಾಲ ಸೇವೆ ಅಮಾನತು ಪ್ರಶ್ನಿಸಿ ನ್ಯಾಯಾಲಯಕ್ಕೆ ಅರ್ಜಿ

Update: 2024-02-12 15:55 GMT

Photo: PTI 

ಚಂಡೀಗಢ : ಫೆಬ್ರವರಿ 13ರಂದು ರೈತ ಸಂಘಟನೆಗಳು ಕರೆ ನೀಡಿರುವ ದಿಲ್ಲಿ ಪ್ರತಿಭಟನೆ ಹಿನ್ನೆಲೆಯಲ್ಲಿ ಹರ್ಯಾಣ ಸರಕಾರವು ಗಡಿಗಳನ್ನು ಬಂದ್ ಮಾಡಿ, ಅಂತರ್ಜಾಲ ಸೇವೆಯನ್ನು ಅಮಾನತುಗೊಳಿಸಿರುವ ಕ್ರಮವನ್ನು ಪ್ರಶ್ನಿಸಿ ಸೋಮವಾರ ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ ಎಂದು ndtv.com ವರದಿ ಮಾಡಿದೆ.

ಹರ್ಯಾಣ, ಪಂಜಾಬ್ ಮತ್ತು ಕೇಂದ್ರ ಸರಕಾರಗಳ ಎಲ್ಲ ತಡೆಯೊಡ್ಡುವ ಕ್ರಮಗಳಿಗೆ ತಡೆ ನೀಡಬೇಕು ಎಂದು ನ್ಯಾಯಾಲಯವನ್ನು ಕೋರಿರುವ ಅರ್ಜಿದಾರ ಉದಯ್ ಪ್ರತಾಪ್ ಸಿಂಗ್, ಈ ಕ್ರಮಗಳಿಂದ ಮೂಲಭೂತ ಹಕ್ಕಿಗೆ ಧಕ್ಜೆಯಾಗಲಿದೆ ಮತ್ತು ಅಸಾಂವಿಧಾನಿಕವಾಗಿದೆ ಎಂದು ವಾದಿಸಿದ್ದಾರೆ.

ಈ ಅರ್ಜಿಯ ವಿಚಾರಣೆಯು ಮಂಗಳವಾರ ನಡೆಯುವ ಸಾಧ್ಯತೆ ಇದೆ.

ಕನಿಷ್ಠ ಬೆಂಬಲ ಬೆಲೆ ಖಾತರಿ ಕಾಯ್ದೆ ಸೇರಿದಂತೆ ಹಲವಾರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ ಹಾಗೂ ಕಿಸಾನ್ ಮಝ್ದೂರ್ ಮೋರ್ಚಾ ಸಂಘಟನೆಗಳು ಕೇಂದ್ರದ ಮೇಲೆ ಒತ್ತಡ ಹೇರಲು ಫೆಬ್ರವರಿ 13ರಂದು ದಿಲ್ಲಿ ಚಲೊ ಪ್ರತಿಭಟನೆಯನ್ನು ಹಮ್ಮಿಕೊಂಡಿವೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News