ಹೈದರಾಬಾದ್ | ಮಿನರ್ವ ಹೋಟೆಲ್ ನಲ್ಲಿ ಭಾರೀ ಅಗ್ನಿ ಅವಘಡ : ವೀಡಿಯೊ ವೈರಲ್

Update: 2025-01-05 16:14 GMT

ಹೈದರಾಬಾದ್: ಹಿಮಾಯತನಗರದ ಪ್ರಸಿದ್ಧ ಮಿನರ್ವ ಕಿಚನ್ ಹೋಟೆಲ್ ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಹೋಟೆಲ್‌ ನಲ್ಲಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ರಾತ್ರಿ 8 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ತೆರಳಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಈ ಕುರಿತ ವೀಡಿಯೊ ವೈರಲ್‌ ಆಗಿದ್ದು, ಕಟ್ಟಡದ ಒಳಗಿನಿಂದ ಬೆಂಕಿಯ ಜ್ವಾಲೆಗಳು ಹೊರ ಬರುತ್ತಿರುವುದು ಕಂಡು ಬಂದಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ ನಿಂದ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು, ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - siddik

contributor

Byline - ವಾರ್ತಾಭಾರತಿ

contributor

Similar News