ಹೈದರಾಬಾದ್ ಸನ್ ರೈಸರ್ಸ್ ತಂಡದ ಆಟಗಾರರು ಉಳಿದುಕೊಂಡಿದ್ದ ಹೋಟೆಲ್ ನಲ್ಲಿ ಅಗ್ನಿ ಅವಘಡ

Update: 2025-04-14 18:54 IST
ಹೈದರಾಬಾದ್ ಸನ್ ರೈಸರ್ಸ್ ತಂಡದ ಆಟಗಾರರು ಉಳಿದುಕೊಂಡಿದ್ದ ಹೋಟೆಲ್ ನಲ್ಲಿ ಅಗ್ನಿ ಅವಘಡ

Screengrab from the video

  • whatsapp icon

ಹೈದರಾಬಾದ್: ಸನ್ ರೈಸರ್ಸ್ ಹೈದರಾಬಾದ್ ತಂಡದ ಆಟಗಾರರು ಉಳಿದುಕೊಂಡಿದ್ದ ಹೈದರಾಬಾದ್ ನ ಬಂಜಾರ ಹಿಲ್ಸ್ ನಲ್ಲಿರುವ ಪಾರ್ಕ್ ಹಯಾತ್ ಹೋಟೆಲ್ ನಲ್ಲಿ ಸೋಮವಾರ ಸಣ್ಣ ಪ್ರಮಾಣದ ಅಗ್ನಿ ಆಕಸ್ಮಿಕ ಸಂಭವಿಸಿದೆ. ಈ ಐಷಾರಾಮಿ ಹೋಟೆಲ್ ನ ಮೂರನೆಯ ಅಂತಸ್ತಿನಲ್ಲಿರುವ ಸ್ಪಾ ಒಂದರಲ್ಲಿ ಈ ಘಟನೆ ನಡೆದಿದೆ.

ಈ ಅಗ್ನಿ ಆಕಸ್ಮಿಕ ಸಂಭವಿಸಿದಾಗ, ಸನ್ ರೈಸರ್ಸ್ ಹೈದರಾಬಾದ್ ತಂಡದ ಆಟಗಾರರು ಹೋಟೆಲ್ ನಿಂದ ನಿರ್ಗಮಿಸುತ್ತಿದ್ದರು ಎಂದು ಹೇಳಲಾಗಿದೆ.

ಪೊಲೀಸರ ಪ್ರಕಾರ, ಈ ಬೆಂಕಿಯನ್ನು ಹೋಟೆಲ್ ಸಿಬ್ಬಂದಿಗಳು ತಕ್ಷಣವೇ ನಂದಿಸಿದ್ದು, ಈ ಘಟನೆಯಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ. ಈ ಘಟನೆಯಲ್ಲಿ ಯಾವುದೇ ಗಮನಾರ್ಹ ಪ್ರಮಾಣದ ಹಾನಿ ಸಂಭವಿಸದಂತೆ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು ಎನ್ನಲಾಗಿದೆ.

ಈ ಘಟನೆಯಿಂದ ಹೋಟೆಲ್ ನಲ್ಲಿ ಉಪಸ್ಥಿತರಿದ್ದ ಅತಿಥಿಗಳು ಅಥವಾ ಸಿಬ್ಬಂದಿಗಳಿಗೆ ಯಾವುದೇ ತೊಂದರೆಯಾಗಿಲ್ಲ ಎಂದು ಪೊಲೀಸರು ದೃಢಪಡಿಸಿದ್ದಾರೆ. ಬೆಂಕಿ ಆಕಸ್ಮಿಕದ ಹಿಂದಿನ ಕಾರಣದ ಕುರಿತು ತನಿಖೆ ನಡೆಯುತ್ತಿದೆ.

Tags:    

Writer - ವಾರ್ತಾಭಾರತಿ

contributor

Editor - Naufal

contributor

Byline - ವಾರ್ತಾಭಾರತಿ

contributor

Similar News