ಕೊಲ್ಕತ್ತಾ ಹೋಟೆಲ್ ನಲ್ಲಿ ಅಗ್ನಿ ದುರಂತ; ಕನಿಷ್ಠ 14 ಮಂದಿ ಸಜೀವ ದಹನ

Update: 2025-04-30 07:30 IST
ಕೊಲ್ಕತ್ತಾ ಹೋಟೆಲ್ ನಲ್ಲಿ ಅಗ್ನಿ ದುರಂತ; ಕನಿಷ್ಠ 14 ಮಂದಿ ಸಜೀವ ದಹನ

PC: x.com/indiatvnews

  • whatsapp icon

ಕೊಲ್ಕತ್ತಾ: ಕೇಂದ್ರ ಕೊಲ್ಕತ್ತಾದ ಫಲಪತ್ತಿ ಮಚ್ಚುವಾ ಬಳಿಯ ಹೋಟೆಲ್ ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಕನಿಷ್ಠ 14 ಮಂದಿ ಜೀವ ಕಳೆದುಕೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಪರಿಹಾರ ಕಾರ್ಯಾಚರಣೆ ಮುಂದುವರಿದಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

"ರಿತುರಾಜ್ ಹೋಟೆಲ್ ನ ಆವರಣದಲ್ಲಿ ರಾತ್ರಿ 8.15ರ ಸುಮಾರಿಗೆ ಈ ದುರಂತ ಸಂಭವಿಸಿದೆ. ಇದುವರೆಗೆ 14 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ರಕ್ಷಣಾ ತಂಡಗಳು ಹಲವು ಮಂದಿಯನ್ನು ರಕ್ಷಿಸಿವೆ ಎಂದು ಕೊಲ್ಕತ್ತಾ ಪೊಲೀಸ್ ಆಯುಕ್ತ ಮನೋಜ್ ಕುಮಾರ್ ವರ್ಮಾ ತಿಳಿಸಿದ್ದಾರೆ.

"ಇದೀಗ ಬೆಂಕಿ ನಿಯಂತ್ರಿಸಲಾಗಿದ್ದು, ರಕ್ಷಣಾ ಕಾರ್ಯ ಪ್ರಗತಿಯಲ್ಲಿದೆ. ತನಿಖೆ ಪ್ರಗತಿಯಲ್ಲಿದ್ದು, ಇದಕ್ಕಾಗಿ ವಿಶೇಷ ತಂಡವನ್ನು ರಚಿಸಲಾಗಿದೆ" ಎಂದು ವಿವರಿಸಿದ್ದಾರೆ. ಬಿಜೆಪಿ ಮುಖಂಡ ಸುಕಾಂತ ಮಜೂಮ್ದಾರ್ ಘಟನೆ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿದ್ದು, ಮಮತಾ ಬ್ಯಾನರ್ಜಿ ಸರ್ಕಾರ ತಕ್ಷಣ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಸಂತ್ರಸ್ತರಿಗೆ ಸೂಕ್ತ ಪರಿಹಾರವನ್ನು ರಾಜ್ಯ ಸರ್ಕಾರ ತಕ್ಷಣ ಒದಗಿಸಬೇಕು ಹಾಗೂ ಅಗತ್ಯ ವೈದ್ಯಕೀಯ ಮತ್ತು ಮಾನವೀಯನೆರವು ನೀಡುವ ಮೂಲಕ ಅವರ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು. ಇಂಥ ದುರಂತಗಳನ್ನು ಭವಿಷ್ಯದಲ್ಲಿ ತಡೆಯುವ ಸಲುವಾಗಿ ಕಟ್ಟುನಿಟ್ಟಿನ ಪರಿಶೀಲನೆ ಮತ್ತು ಕಣ್ಗಾವಲು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News