ಆಂಧ್ರ ಪ್ರದೇಶ, ತೆಲಂಗಾಣದಲ್ಲಿ ಪ್ರವಾಹ | ಪರಿಹಾರ ಕಾರ್ಯಗಳಿಗೆ ಅಲ್ಲು ಅರ್ಜುನ್, ಚಿರಂಜೀವಿ, ಮಹೇಶ್ ಬಾಬು ದೇಣಿಗೆ

Update: 2024-09-04 15:11 GMT

ಅಲ್ಲು ಅರ್ಜುನ್, ಚಿರಂಜೀವಿ, ಮಹೇಶ್ ಬಾಬು 

ಹೈದರಾಬಾದ್ : ಆಂಧ್ರಪ್ರದೇಶ ಮತ್ತು ತೆಲಂಗಾಣಗಳಲ್ಲಿ ಧಾರಾಕಾರ ಮಳೆ ಮತ್ತು ನಂತರದ ಪ್ರವಾಹದ ಹಿನ್ನೆಲೆಯಲ್ಲಿ ನೆರೆ ಪರಿಹಾರ ಕಾರ್ಯಗಳನ್ನು ಬೆಂಬಲಿಸಲು ಚಿರಂಜೀವಿ, ಅಲ್ಲು ಅರ್ಜುನ್ ಮತ್ತು ಮಹೇಶ್ ಬಾಬು ಸೇರಿದಂತೆ ತೆಲುಗು ಚಿತ್ರರಂಗದ ಇನ್ನಷ್ಟು ಗಣ್ಯರು ಮುಂದಾಗಿದ್ದಾರೆ.

ಉಭಯ ರಾಜ್ಯಗಳ ಹಲವಾರು ಭಾಗಗಳು ಪ್ರವಾಹದಿಂದ ತತ್ತರಿಸಿವೆ. ಕಳೆದ ಮೂರು ದಿನಗಳಿಂದ ನಿರಂತರ ಮಳೆಯಿಂದಾಗಿ ಹಾಗೂ ಕೆರೆಗಳು ಮತ್ತು ನದಿಗಳಲ್ಲಿ ನೀರು ಉಕ್ಕಿ ಹರಿಯುತ್ತಿರುವುದರಿಂದ ಹಲವಾರು ಪ್ರದೇಶಗಳು ಜಲಾವೃತಗೊಂಡಿವೆ.

ಮಳೆ ಮತ್ತು ನೆರೆ ಸಂಬಂಧಿತ ಘಟನೆಗಳಲ್ಲಿ ತೆಲಂಗಾಣದಲ್ಲಿ 16 ಮತ್ತು ಆಂಧ್ರಪ್ರದೇಶದಲ್ಲಿ 17 ಸೇರಿದಂತೆ ಕನಿಷ್ಠ 33 ಜನರು ಮೃತಪಟ್ಟಿದ್ದಾರೆ.

ಆಂಧ್ರಪ್ರದೇಶ ಮತ್ತು ತೆಲಂಗಾಣಗಳಲ್ಲಿ ಪ್ರವಾಹಗಳಿಂದಾಗಿ ಜನರು ಸಂಕಷ್ಟಕ್ಕೆ ಸಿಲುಕಿರುವುದು ತನಗೆ ನೋವನ್ನುಂಟು ಮಾಡಿದೆ ಎಂದು ಬುಧವಾರ ಎಕ್ಸ್ ಪೋಸ್ಟ್‌ನಲ್ಲಿ ಹೇಳಿರುವ ಚಿರಂಜೀವಿ, ಆಂಧ್ರ ಪ್ರದೇಶ ಮತ್ತು ತೆಲಂಗಾಂಣ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ತಲಾ 50 ಲಕ್ಷ ರೂ.ಗಳಂತೆ ಒಂದು ಕೋಟಿ ರೂ.ಗಳ ದೇಣಿಗೆಯನ್ನು ಪ್ರಕಟಿಸಿದ್ದಾರೆ.

ಅಲ್ಲು ಅರ್ಜುನ್, ಮಹೇಶ್ ಬಾಬು ಮತ್ತು ಜ್ಯೂನಿಯರ್ ಎನ್‌ಟಿಆರ್ ಅವರೂ ವೈಯಕ್ತಿಕವಾಗಿ ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಪರಿಹಾರ ನಿಧಿಗಳಿಗೆ ತಲಾ 50 ಲಕ್ಷ ರೂ.ಗಳ ಕೊಡುಗೆಗಳನ್ನು ಘೋಷಿಸಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News