ವಿದೇಶಿ ವಿನಿಮಯ ಉಲ್ಲಂಘನೆ ಪ್ರಕರಣ ; ಮಹುವಾ ಮೊಯಿತ್ರಾಗೆ ಈಡಿ ನೋಟಿಸ್
Update: 2024-03-04 16:07 GMT
ಹೊಸದಿಲ್ಲಿ : ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿ ಮಾರ್ಚ್ 11ರಂದು ವಿಚಾರಣೆಗೆ ಹಾಜರಾಗುವಂತೆ ತೃಣಮೂಲ ಕಾಂಗ್ರೆಸ್ ನಾಯಕಿ ಹಾಗೂ ಮಾಜಿ ಸಂಸದೆ ಮಹುವಾ ಮೊಯಿತ್ರಾ ಅವರಿಗೆ ಜಾರಿ ನಿರ್ದೇಶನಾಲಯ ಹೊಸ ಸಮನ್ಸ್ ಜಾರಿ ಮಾಡಿದೆ.
ಮಹುವಾ ಮೊಯಿತ್ರಾ ಅವರು ತನಿಖೆಯಲ್ಲಿ ಪಾಲ್ಗೊಳ್ಳಲು ಕೆಲವು ವಾರಗಳ ಕಾಲಾವಕಾಶ ಕೋರಿದ್ದರು ಹಾಗೂ ಕಳೆದ ತಿಂಗಳು ಹಾಜರಾಗಲು ಸಾಧ್ಯವಾಗದಿರುವ ಕುರಿತು ಜಾರಿ ನಿರ್ದೇಶನಾಲಯಕ್ಕೆ ತಿಳಿಸಿದ್ದರು ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಈಗ ಜಾರಿ ನಿರ್ದೇಶನಾಲಯ ದಿಲ್ಲಿಯಲ್ಲಿರುವ ತನ್ನ ಕಚೇರಿಯಲ್ಲಿ ಮಾರ್ಚ್ 11ರಂದು ಹಾಜರಾಗುವಂತೆ ಮಹುವಾ ಮೊಯಿತ್ರಾ ಅವರಿಗೆ ಸೂಚಿಸಿದೆ ಎಂದು ಅವು ತಿಳಿಸಿವೆ.
ವಿದೇಶಿ ವಿನಿಮಯ ನಿರ್ವಹಣೆ ಕಾಯ್ದೆಯ ನಿಯಮಗಳ ಅಡಿಯಲ್ಲಿ ಮಹುವಾ ಮೊಯಿತ್ರಾ ಅವರನ್ನು ಪ್ರಶ್ನಿಸಲು ಹಾಗೂ ಹೇಳಿಕೆಗಳನ್ನು ದಾಖಲಿಸಿಕೊಳ್ಳಲು ಜಾರಿ ನಿರ್ದೇಶನಾಲಯ ಬಯಸಿದೆ ಎಂದು ಅವು ಹೇಳಿವೆ.