ಮಧ್ಯಪ್ರದೇಶ ಹೈಕೋರ್ಟಿನ ನಿವೃತ್ತ ನ್ಯಾಯಾಧೀಶ ರೋಹಿತ್ ಆರ್ಯ ಬಿಜೆಪಿ ಸೇರ್ಪಡೆ

Update: 2024-07-14 09:45 GMT

Photo credit: abplive.com

ಭೋಪಾಲ್: ಮಧ್ಯಪ್ರದೇಶ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶ ನ್ಯಾ. ರೋಹಿತ್ ಆರ್ಯ ಶನಿವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ. ತಮ್ಮ ನಿವೃತ್ತಿಯ ಮೂರು ತಿಂಗಳ ನಂತರ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ ಎಂದು ವರದಿಯಾಗಿದೆ.

ಭೋಪಾಲ್‌ನಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಕಾರ್ಯಕ್ರಮವೊಂದರಲ್ಲಿ ನ್ಯಾ. ರೋಹಿತ್ ಆರ್ಯ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ಸ್ವೀಕರಿಸಿದ್ದಾರೆ.

1962ರಲ್ಲಿ ಜನಿಸಿದ ರೋಹಿತ್ ಆರ್ಯ, 1984ರಲ್ಲಿ ವಕೀಲಿಕೆ ವೃತ್ತಿಗೆ ನೋಂದಾಯಿಸಿಕೊಂಡಿದ್ದರು. 2003ರಲ್ಲಿ ಅವರನ್ನು ಮಧ್ಯಪ್ರದೇಶ ಹೈಕೋರ್ಟಿನ ಹಿರಿಯ ವಕೀಲರನ್ನಾಗಿ ನೇಮಿಸಲಾಗಿತ್ತು. 2013ರಲ್ಲಿ ಅವರಿಗೆ ಹೈಕೋರ್ಟ್ ನ್ಯಾಯಾಧೀಶರಾಗಿ ಪದೋನ್ನತಿ ನೀಡಲಾಗಿತ್ತು ಹಾಗೂ 2015ರಲ್ಲಿ ಖಾಯಂ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಎಪ್ರಿಲ್ 27, 2024ರಲ್ಲಿ ಅವರು ತಮ್ಮ ಸೇವೆಯಿಂದ ನಿವೃತ್ತರಾಗಿದ್ದರು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News